ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಶಹಾಪುರ : ತಾಲೂಕಿನ ಗೋಗಿ ಗ್ರಾಮದಲ್ಲಿ ಡೀಸೆಲ್, ಪೆಟ್ರೋಲ್ ದರ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಜಲಾಲ್ ಪೆಟ್ರೋಲ್ ಬಂಕ್ ಎದುರು ಹಿರಿಯ ಮುಖಂಡರಾದ ಬಸವರಾಜಪ್ಪ ಗೌಡ ತಂಗಡಿಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೋವಿಡ್ ಸಮಯದಲ್ಲಿ ಯಾವ ಮುಲಾಜಿಯಿಲ್ಲದೆ ಪೆಟ್ರೋಲ್, ಡೀಸೆಲ್, ಗ್ಯಾಸ್, ವಿದ್ಯುತ್ ದರ ಏರಿಸುವ ಮುಖಾಂತರ ಗಾಯದ ಮೇಲೆ ಬರೆ ಹಾಕುವ ಕೆಲಸ ಬಿಜೆಪಿ ಮಾಡುತ್ತಿದೆ. ಬೆಲೆ ನಿಯಂತ್ರಣ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೊದಿಯವರು ದೇಶದ ಜನರನ್ನು ವಂಚಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

ಪೆಟ್ರೊಲ್ ಬೆಲೆ 100 ರೂ. ಗಡಿದಾಟಿದೆ ಡಿಸೇಲ್, ಅಡುಗೆ ಅನಿಲ ದರ ಗಗನಕ್ಕೇರಿದೆ. ನಿರಂತರ ಬೆಲೆ ಏರಿಕೆಯಿಂದಾಗಿ ರೈತರು ಹಾಗೂ ಬಡವರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಆರೋಪಿಸಿದರು. ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದರ ಬದಲು ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸರ್ಕಾರಗಳು ಬೆಲೆ ಇಳಿಕೆಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತರರದ ಮಲ್ಲಪ್ಪ ಉಳಂಡ ಗೇರಿ ಗೋಗಿ, ಸುಭಾಷ್ ರೆಡ್ಡಿ ದೇವಣಗಾವ್, ಶರಣ್ ಗೌಡ ಗೋನಾಲ್, ರಾಜಶೇಖರ್ ಶಿರಡ್ಡಿ, ಅಲ್ಲಭಾಷಾ, ಮೋಹನ್ ಹುಡೇದ್, ಮಲ್ಲಪ್ಪ ಮಾವಿನಮರದ, ಚಂದಪ್ಪ ಸಿತ್ನಿ, ಮೋನಪ್ಪ ಹೊಸಮನಿ, ಶಿವು ತಳವಾರ್, ಮೋನಪ್ಪ ಗಡ್ಡದ, ಮಲ್ಲಿಕಾರ್ಜುನ್ ಹೊಸಮನಿ ಸೇರಿದಂತೆ ಕಾರ್ಯಾಕರ್ತರು ಇದ್ದರು.

Related