ಕೇಂದ್ರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ

ಕೇಂದ್ರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ

ಬೆಂಗಳೂರು: ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು ಇಂದು ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.

ಬಿಜೆಪಿ ಸರ್ಕಾರವು ಎಪಿಎಂಸಿ ಕಾಯ್ದೆ, ಕೃಷಿ ಕಾಯ್ದೆ, ವಿದ್ಯುತ್ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡುತ್ತಿದೆ. ಇದನ್ನು ದೇಶದ ಅನೇಕ ಸಂಘಟನೆಗಳು ತೀವ್ರವಾಗಿ ವಿರೋಧಿಸುತ್ತಿವೆ. ಆದರೆ ರೈತರ ಉದ್ದೇಶಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯದ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದರು.

ಪ್ರತಿಭಟನೆಯಲ್ಲಿ ಹಿರಿಯ ನಾಯಕರಾದ ಡಾ.ಜಿ. ಪರಮೇಶ್ವರ, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

Related