ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ

ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ

ಶಿವಮೊಗ್ಗ : ಕಿಮ್ಮನೆ ರತ್ನಾಕರ್ “ಭದ್ರಾವತಿಯಲ್ಲಿ ಬಿಜೆಪಿ ಮುಖಂಡರು ನೀಡುತ್ತಿರುವ ಪಟ್ಟಿಯ ಆಧಾರದ ಮೇಲೆ ಪೊಲೀಸರು ಕೇಸ್ ಹಾಕುತ್ತಿದ್ದಾರೆ. ಪೊಲೀಸರು ಬಿಜೆಪಿ ಕಾರ್ಯಕರ್ತರ ರೀತಿ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಗಡುವು ನೀಡಿದರು.

ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು ನೀಡುತ್ತಿರುವ ಪಟ್ಟಿ ಆಧಾರದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಕೇಸ್ ಹಾಕುತ್ತಿದ್ದಾರೆ. ಮಧ್ಯಾಹ್ನದೊಳಗೆ ಎಲ್ಲವೂ ನಿಲ್ಲಬೇಕು. ಸಂಗಮೇಶ್ವರ್ ಅವರು ಬೆಂಗಳೂರಿನಲ್ಲಿದ್ದಾರೆ. ಇಲ್ಲಿ ಏನು ಬೇಕಾದರೂ ನಡೆಸಬಹುದು ಅಂತಾ ಇದ್ದರೆ ಇವತ್ತು ಮಧ್ಯಾಹ್ನ 2 ಗಂಟೆ ಒಳಗೆ ಎಲ್ಲವು ನಿಲ್ಲಬೇಕು” ಎಂದು ಗಡುವು ವಿಧಿಸಿದರು.

ಗಲಾಟೆ ಮಾಡಿಸುವುದಕ್ಕಾಗಿಯೇ ಬಿಜೆಪಿ ಅವರು ಭಾಗಿಯಾಗಿದ್ದಾರೆ. ಈಗಾಗಲೇ ಹಲವರನ್ನು ಪೊಲೀಸರು ಕರೆದೊಯ್ದಿದ್ದಾರೆ. ಬಿಜೆಪಿಯವರ ಪಟ್ಟಿ ಆಧಾರದ ಮೇಲೆ ಪೊಲೀಸರು ಈ ರೀತಿ ಮಾಡಿದ್ದಾರೆ” ಎಂದು ಕಿಮ್ಮನೆ ರತ್ನಾಕರ್ ದೂರಿದರು.

ಕುಟುಂಬದ ವಿರುದ್ಧ ಸುಳ್ಳು ಕೇಸ್ “ಭದ್ರಾವತಿ ಶಾಸಕ ಸಂಗಮೇಶ್ವರ್ ಮತ್ತು ಅವರ ಕುಟಂಬದವರ ವಿರುದ್ಧ ಸುಳ್ಳು ಪ್ರಕರಣ ದಾಖಲು ಮಾಡಿದ್ದಾರೆ. ಇದನ್ನು ಹಿಂಪಡೆಯಬೇಕು. ಮಾಜಿ ಶಾಸಕ ಅಪ್ಪಾಜಿಗೌಡರು ಈಗ ಇಲ್ಲ. ಸಂಗಮೇಶ್ವರ್ ಒಬ್ಬರೆ ಆಗಿದ್ದಾರೆ. ಹಾಗಾಗಿ ಅವರನ್ನು ಮಣಿಸಬಹುದು ಅಂದುಕೊಂಡಿದ್ದರೆ ಅದು ತಪ್ಪು” ಎಂದು ಕಿಮ್ಮನೆ ರತ್ನಾಕರ್ ಎಚ್ಚರಿಸಿದರು.

ಬೆಳವಣಿಗೆ ಬಳಿಕ ಪಟ್ಟಣದಲ್ಲಿ ಮತ್ತೊಮ್ಮೆ ಗಲಾಟೆ ನಡೆಯುವ ಸುಳಿವು ಸಿಕ್ಕಿತ್ತು. ಇದರಿಂದಾಗಿ ಪಟ್ಟಣದಲ್ಲಿ ಮಾರ್ಚ್ 5ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್ ಶಾಸಕ ಬಿ. ಕೆ. ಸಂಗಮೇಶ್ವರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಹಳೇ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related