ಕಾಂಗ್ರೆಸ್ ಅನ್ನು ʼಟಿʼಸಿಎಂ, ʼಡಿʼಸಿಎಂ ಸರ್ಕಾರ ಎಂದು ಕರೆಯಬಹುದು: ಹೆಚ್ ಡಿಕೆ

ಕಾಂಗ್ರೆಸ್ ಅನ್ನು ʼಟಿʼಸಿಎಂ, ʼಡಿʼಸಿಎಂ ಸರ್ಕಾರ ಎಂದು ಕರೆಯಬಹುದು: ಹೆಚ್ ಡಿಕೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿ ಸದ್ದು ಮಾಡುತ್ತಿದ್ದು, ನಿನ್ನೆ ಸಚಿವ ಪ್ರಿಯಾಂಕರ್ ಗೆ ಅವರು ಸಿಎಂ ಕುರ್ಚಿಯ ಬಗ್ಗೆ ಮಾತನಾಡಿದರು. ಆದರಿಗ ಜೆಡಿಎಸ್ ನ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆದರೆ ಬೆಂಬಲ ನೀಡುತ್ತೇನೆಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

ಹೌದು, ಡಿ.ಕೆ ಶಿವಕುಮಾರ್​ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್​ ಬೆಂಬಲ ನೀಡುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ಜೆಡಿಎಸ್ ಪಕ್ಷದ 19 ಶಾಸಕರು ಬೆಂಬಲ ನೀಡುತ್ತಾರೆ ಎಂದು ಓಪನ್ ಆಫರ್​ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಲ್ಲರೂ ತಾವು ಸಿಎಂ ಆಕಾಂಕ್ಷಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದರು.

ಹೀಗಾಗಿ ರಾಜ್ಯ ಕಾಂಗ್ರೆಸ್ ಅನ್ನು ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ವಿದೇಶ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿರುವ ಎಚ್ ಡಿ ಕುಮಾರಸ್ವಾಮಿ ಅವರು ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗಿದ್ದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

Related