ಬೆಂಗಳೂರು : ಇಂದು ಕೆಪಿಸಿಸಿ ಕಚೇರಿಯಲ್ಲಿ ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಸ್ಪರ್ಧಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಅವರು, ಮಾಜಿ ಉಪ ಮುಖ್ಯಮಂತ್ರಿಗ ಡಾ.ಜಿ. ಪರಮೇಶ್ವರ, ಮಾಜಿ ಸಂಸದ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ, ಮಾಜಿ ಶಾಸಕ ಕೆ.ಎನ್ ರಾಜಣ್ಣ, ರಫೀಕ್ ಅಹಮದ್, ಕೆ.ಷಡಾಕ್ಷರಿ ಸೇರಿದಂತೆ ಮತ್ತಿತರರ ನಾಯಕರು ಪಾಲ್ಗೊಂಡಿದ್ದರು.