ಕಾಂಗ್ರೆಸ್ ಸಮಿತಿಗಳ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಸಮಿತಿಗಳ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶದ ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕೇಂದ್ರ ಬಿಜೆಪಿ ಸರ್ಕಾರವು ಸಾರ್ವಜನಿಕ ಸಂಸ್ಥೆಗಳಾದ ಎಲ್.ಐ.ಸಿ ಮತ್ತು ಎಸ್‌ಬಿಐ ಬ್ಯಾಂಕ್‌ಗಳನ್ನು ಒತ್ತಾಯಪೂರ್ವಕವಾಗಿ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿಸಿ, ಅದರ ನಷ್ಟತೆಯಿಂದ ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗುಂಪಿನ ವಿರುದ್ಧ ಮಾಡಲಾದ ಆರೋಪಗಳ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಅಥವಾ ಜಂಟಿ ಸಂಸದಿ ಸಮಿತಿಯ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ  ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ ರವರ ನೇತೃತ್ವದಲ್ಲಿ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ  ಇಂದು ಬೆಳಿಗ್ಗೆ 11.00 ಗಂಟೆಗೆ ಕೆ.ಜಿ.ರಸ್ತೆಯ ಮೈಸೂರು ಬ್ಯಾಂಕ್ ವೃತ್ತ ದಲ್ಲಿ ಬೃಹತ್ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಯಿತು.

ಈ ಪ್ರತಿಭಟನೆಯಲ್ಲಿ ಸನ್ಮಾನ್ಯ ಸಂಸದರು, ಮಾಜಿ ಸಚಿವರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಮಾಜಿ ಮಹಾಪೌರರುಗಳು, ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.

 

 

Related