ಕಾನೂನು ಉಲ್ಲಂಘನೆ ಮಾಡುವುದೇ ಈ ಪಕ್ಷದ ಅಜೆಂಡಾ: ಬಿಜೆಪಿ ವಿರುದ್ಧ ಡಿ.ಕೆ ಸುರೇಶ್ ಕಿಡಿ

ಕಾನೂನು ಉಲ್ಲಂಘನೆ ಮಾಡುವುದೇ ಈ ಪಕ್ಷದ ಅಜೆಂಡಾ: ಬಿಜೆಪಿ ವಿರುದ್ಧ ಡಿ.ಕೆ ಸುರೇಶ್ ಕಿಡಿ

ಹಾಸನ, ಜೂ 10: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಮೂರು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗಳಲ್ಲಿ ಆ್ಯಕ್ಷನ್ ಪ್ಲಾನ್ ಮಾಡಿಲ್ಲ. ಭ್ರಷ್ಟ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಅವರ ಅಜೆಂಡಾವನ್ನು ಮುಂದಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಂಸದ ಡಿ.ಕೆ ಸುರೇಶ್​ ಕಿಡಿಕಾರಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನನ್ನು ಉಲ್ಲಂಘನೆ ಮಾಡುವುದೇ ಬಿಜೆಪಿಯವರ ಅವರ ಮೊದಲ ಅಜೆಂಡಾ. ವಿಶ್ವ ಮಾನವ ಕುವೆಂಪು ಅಂದರೆ ಆಗಲ್ಲ, ಸಂವಿಧಾನ ಶಿಲ್ಪಿ ಅಂದರೆ ಅವರಿಗೆ ಆಗಲ್ಲ , ಇದು ವಿಪರ್ಯಾಸ. ಬಾಯಲ್ಲಿ ಮಾತ್ರ ಬಸವಣ್ಣ ಅಂತಾರೆ ಆದರೆ ಅವರ ತತ್ವಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂದು ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಅಸಮಾಧಾನ ಹೊರಹಾಕಿದರು.

ಇನ್ನು ಹಣಕಾಸು ಇಲಾಖೆ ಒಪ್ಪಿಗೆ ಇಲ್ಲದೆ ಪಠ್ಯ ಪುಸ್ತಕ ಮುದ್ರಣ ಮಾಡಿದ್ದಾರೆ. ಇದಕ್ಕೆ ಶಿಕ್ಷಣ ಇಲಾಖೆ ಸಚಿವರೇ ನೇರ ಹೊಣೆ. ಇಲ್ಲವಾದರೆ ಮುಖ್ಯಮಂತ್ರಿಗಳು ಹೊಣೆಹೊತ್ತು ರಾಜೀನಾಮೆ ಕೊಡಬೇಕು. ಇದರ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಎಸ್ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿವೆ.

ಎಲ್ಲಾ ಸಮುದಾಯಗಳನ್ನು ಒಗ್ಗೂಡಿಕೊಂಡು ಹೋಗುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸಮ ಸಮಾಜವನ್ನು ಕಟ್ಟುವ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ, ಅದನ್ನು ಮಾಡುತ್ತಿದ್ದೇವೆ ಎಂದರು.

Related