Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಲಕ್ಷ್ಮೀ ಹೆಬ್ಬಾಳಕರ್
  • Bangalore
  • Front news
  • Politics
  • State

ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಲಕ್ಷ್ಮೀ ಹೆಬ್ಬಾಳಕರ್

admin March 15, 2025 1 minute read
Spread the love

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಇಂದು (ಶನಿವಾರ ಮಾ.15) ರಂದು ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರ, ಯುವಕರ, ವೃದ್ಧರ ಹೀಗೆ..ಎಲ್ಲರಿಗೂ ಸಲ್ಲುವ ಪಕ್ಷ ಕಾಂಗ್ರೆಸ್ ಪಕ್ಷ ಎಂದರು.

ಎಲ್ಲರಿಗೂ ಅನ್ನ, ಅಕ್ಷರ, ವಿದ್ಯೆಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಲಿದೆ ಎಂದು ಸಚಿವರು ಹೇಳಿದರು.‌

ಮಹಿಳೆಯರು ಇವತ್ತು ಯಾವುದರಲ್ಲೂ‌ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು‌ ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸುವುದು ನಮ್ಮ ಆದ್ಯತೆ: ಡಿಸಿಎಂ

ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ.  ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ಕಾಂಗ್ರೆಸ್ 2 ವರ್ಷಗಳಿಂದ ಜನ ವಿರೋಧಿ ನೀತಿ ಅನುಸರಿಸುತ್ತಿದೆ: ಜೆಡಿಎಸ್‌
Next: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಕೊಲೆ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.