ಕಾಂಗ್ರೆಸ್ ಸರ್ಕಾರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ: ಗಣೇಶ್ ಪ್ರಸಾದ್

ಕಾಂಗ್ರೆಸ್ ಸರ್ಕಾರ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ: ಗಣೇಶ್ ಪ್ರಸಾದ್

ಗುಂಡ್ಲುಪೇಟೆ: ತಾಲ್ಲೂಕಿನ ಹೊಂಗಳ್ಳಿ ಹಾಗೂ ಮದ್ಯಯ್ಯನಹುಂಡಿ ಗ್ರಾಮದಲ್ಲಿ ಒಂದು ಕೋಟಿ ನಲವತ್ತು ಲಕ್ಷರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ – ಚರಂಡಿ ನಿರ್ಮಾಣ ಕಾಮಗಾರಿ ಕೆಲಸಕ್ಕೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕೆ.ಅರ್.ಡಿ.ಸಿ.ಎಲ್ ಮೂಲಕ  ತಾಲ್ಲೂಕಿನ ಹೊಂಗಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಜನಾಂಗದವರು ವಾಸ ಮಾಡುವ  ಬೀದಿಯಲ್ಲಿ 50 ಲಕ್ಷರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. ಅದೇ ರೀತಿ ಸಮಾನ್ಯ ವರ್ಗದವರು ವಾಸ ಮಾಡುವ ಬೀದಿಯಲ್ಲಿ 40 ಲಕ್ಷರೂ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ. ಮದ್ಯಯ್ಯನಹುಂಡಿ ಗ್ರಾಮದಲ್ಲಿ50 ಲಕ್ಷರೂ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಜನಾಂಗದವರು ವಾಸಮಾಡುವ ಬೀದಿಯಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದ್ದು ಮುಂದಿನ 6 ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡುವ ಮೂಲಕ ಗುಣಮಟ್ಟದ ಕಾಮಗಾರಿ ಮಾಡುವಂತೆ ಸಮಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ಇದನ್ನೂ ಓದಿ: ನನ್ನ ಹಿಂದೆ ಬಂದರೂ ನಿಮಗೆ ಬೀಳಲ್ಲ ಎಂದು ಹೇಳಿದ್ಯಾಕೆ ಡಿಂಪಲ್ ಕ್ವೀನ್

ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪರಿಶಿಷ್ಟ ಜಾತಿ, ಪಂಗಡದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ, ಪರಿಶಿಷ್ಟ ಜಾತಿ ಜನಾಂಗದ ಮಕ್ಕಳ ವಿದ್ಯಾರ್ಥಿಗಳು ವಸತಿ ಶಾಲೆಗಳು ಹಾಗೂ ಜನಾಂಗದವರ ಮದುವೆ, ಶುಭ ಕಾರ್ಯಕ್ರಮಗಳಿಗೆ ಅನುಕೂಲ ವಾಗಲೆಂದು ಪ್ರತಿ ಗ್ರಾಮದಲ್ಲೂ ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ನಮ್ಮ 18 ತಿಂಗಳ ಆಡಳಿತ ಅವಧಿಯಲ್ಲಿ ಸರ್ಕಾರದ ಮೂಲಕ ವಿಶೇಷ ಅನುದಾನ ತರುವ ಮೂಲಕ ಕ್ಷೇತ್ರದ ಹಲವೆಡೆ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಜನಾಂಗದವರು ವಾಸ ಮಾಡುವ ಕಾಲೊನಿ ಹಾಗೂ ಬಡಾವಣೆಯಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಸಿ.ಸಿ.ಚರಂಡಿ ಕಾಮಗಾರಿ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು.

ಪಕ್ಷ ರಾಜಕಾರಣ ಚುನಾವಣೆಯಲ್ಲಿ ಮಾತ್ರ

ನಾನು ರಾಜಕೀಯ ಕುಟುಂಬದಿಂದಲೇ ಹುಟ್ಟಿಬಂದಿರುವುದು ನಮ್ಮ ತಂದೆ, ತಾಯಿ ರವರ ರಾಜಕೀಯ ಆಡಳಿತ ಕಂಡಿದ್ದು ನಾನು ಕೂಡ ಅವರ ಹಾದಿಯಲ್ಲಿ ಮುಂದುವರೆಯುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಕೆ.ಎಸ್.ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಬಿ.ರಾಜಶೇಖರ, ಸೇರಿದಂತೆ ಗ್ರಾಮಸ್ಥರು, ಪಕ್ಷದ ಕಾರ್ಯಕರ್ತರು, ಮುಖಂಡರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related