ಕೇಂದ್ರ ಸರ್ಕಾರದ ವಿರುದ್ದ ಕಪ್ಪುಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ದ ಕಪ್ಪುಪತ್ರ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಕಪ್ಪು ಪತ್ರವನ್ನು ಬಿಡುಗಡೆ ಮಾಡಲು ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ದೇಶದಲ್ಲಿ 10 ವರ್ಷದಿಂದ ನರೇಂದ್ರ ಮೋದಿಯವರು ನಿರುದ್ಯೋಗ ಸಮಸ್ಯೆ, ಬೆಲೆ ಏರಿಕೆ ಸಮಸ್ಯೆ, ರೈತರ ಸಮಸ್ಯೆ ಇದ್ಯಾವುದನ್ನು ಬಗೆಹರಿಸದೆ ಕೇವಲ ಕೆಲ ಪಕ್ಷ ಉದ್ಧಾರಕ್ಕಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಪ್ಪು ಪತ್ರ ಬಿಡುಗಡೆ ಮಾಡಿದ್ದು, ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 10 ವರ್ಷಗಳ ಮೋದಿ ಸರ್ಕಾರದ ಅವಧಿಯ ವೈಫಲ್ಯಗಳನ್ನು ಪಟ್ಟಿ ಮಾಡಿರುವ ಬ್ಲ್ಯಾಕ್ ಪೇಪರ್ ಬಿಡುಗಡೆ ಮಾಡಿದ್ದಾರೆ.

ಕಪ್ಪು ಪತ್ರಕ್ಕೆ ಹತ್ತು ವರ್ಷಗಳ ಅನ್ಯಾಯದ ಕಾಲ ಎಂದು ಹೆಸರಿಸಲಾಗಿದೆ. ಪಕ್ಷದ ಪ್ರಕಾರ, ಕಪ್ಪು ಪತ್ರದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಮತ್ತು ರೈತರ ಸಂಕಷ್ಟದ ಕುರಿತು ಪಟ್ಟಿ ಮಾಡಿರುವುದು ಕಂಡು ಬಂದಿದೆ.

ಕಪ್ಪು ಪತ್ರ ಬಿಡುಗಡೆ ಮಾಡಿದ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಅವರು, “ನಾವು ಸರ್ಕಾರದ ವಿರುದ್ಧ ‘ಕಪ್ಪು ಪತ್ರ’ ಬಿಡುಗಡೆ ಮಾಡುತ್ತಿದ್ದೇವೆ, ಏಕೆಂದರೆ ಅವರು ಸಂಸತ್ತಿನಲ್ಲಿ ಮಾತನಾಡುವಾಗ ಅವರು ಯಾವಾಗಲೂ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ತಮ್ಮ ವೈಫಲ್ಯಗಳ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಅವರು ಆರ್ಥಿಕತೆಯಲ್ಲಿ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದರು.

ಈ ವೇಳೆ ಕಾಂಗ್ರೆಸ್‌ ನಾಯಕರಾದ ಪವನ್‌ ಖೇರಾ, ರಾಜ್ಯಸಭಾ ಸಂಸದ ನಾಸಿರ್‌ ಹುಸೇನ್ ಹಾಗೂ ಶಾಸಕ ಆರ್‌.ವಿ. ದೇಶಪಾಂಡೆ ಇದ್ದರು.

Related