ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಇದೆ: ಬೊಮ್ಮಾಯಿ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಇದೆ: ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆಗೆ ಭರ್ಜರಿ ಆಪರೇಷನ್ ಹಸ್ತ ಮಾಡಲು ಮುಂದಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚು ಸೀಟ್ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು  ಹೇಳಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.

ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮುಂಗಾರು ಮಳೆ ಬರೆದ ಕಾರಣ ಈಗಾಗಲೇ ರೈತರು ತಮ್ಮ ಬೆಳೆಯನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲಿಕಿದ್ದಾರೆ ಆದರೂ ಸಹ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿ ಕೂತಿದೆ ಎಂದರು

ಇನ್ನು ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡಬೇಕು. ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ಬೆಳೆ ಕಳೆದುಕೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ 3 ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ. ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮಕೈಗೊಂಡಿಲ್ಲ. ಕುಡಿಯುವ ನೀರು, ಬೆಳೆ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

 

Related