ಲೋಕಸಭಾ ಚುನಾವಣೆಗೆ ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಚಿಂತನೆ!

ಲೋಕಸಭಾ ಚುನಾವಣೆಗೆ ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಚಿಂತನೆ!

ಹಾಸನ: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಹುಮತದಿಂದ ಗೆದ್ದು ತನ್ನ ಅಧಿಕಾರದ ಗದ್ದುಗೆ ಏರಿದ್ದು, 2024ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚು ಸೀಟ್ ಗಳನ್ನು ಗಳಿಸಲು ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೆ.

ಇನ್ನು ತುಮಕೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯ ಕಣ ರಂಗೇರಿದು ಈ ಬಾರಿ ಲೋಕಸಭಾ ಚುನಾವಣೆಗೆ ಸಚಿವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಿದೆ ಎಂದು ತಿಳಿದು ಬರುತ್ತದೆ.

ಹೌದು, ಈಬಾರಿ ತುಮಕೂರಿನ್ಲಿ ಲೋಕಸಭಾ ಚುನಾವಣೆಗೆ ಸಚಿವರನ್ನ ಕಣಕ್ಕಿಳಿಸುವ ಕುರಿತು ಜಿಲ್ಲಾ ಕಾಂಗ್ರೆಸ್‌ ನಾಯಕರು ಚರ್ಚೆ ನಡೆಸಿದ್ದಾರೆ.

ಲೋಕಸಭಾ ಚುನಾವಣಗೆ ಎಐಸಿಸಿಯವರು ನಿಲ್ಲು ಎಂದರೆ ನಿಲ್ಲುತ್ತೇನೆ ಎಂದು ಕೆ ಎನ್‌ ರಾಜಣ್ಣ ಹೇಳಿದ್ದಾರೆ. ನನ್ನ 50 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ತಯಾರಿ ಇಲ್ಲದೆ, ಜೇಬಿನಲ್ಲಿ ಹತ್ತು ರೂಪಾಯಿ ಇಲ್ಲದೆ ಚುನಾವಣೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

 

Related