ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರುಗಳು ಒಂದಲ್ಲ ಒಂದು ಆರೋಪ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜ ನೀಡಬೇಕೆಂದು ಈಗಾಗಲೇ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ.
ಅದರಂತೆ ಮತ್ತೆ ಇದೀಗ ಬಿಜೆಪಿಯ ಎಂಎಲ್ಸಿ ಸಿಟಿ ರವಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಎಂದು ಟೀಕಿಸಿದ್ದಾರೆ.
ನಗರದಲ್ಲಿಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಕೈಗೊಂಡಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಭ್ರಷ್ಟ ಕಾಂಗ್ರೆಸ್ ಸರಕಾರದ ರೇಟ್ ಕಾರ್ಡ್ ಪ್ರದರ್ಶನ ಮಾಡಿದ್ದೇವೆ, ನೀವು ಯಾರು ಬೇಕಿದ್ದರೂ ಇದನ್ನು ಪರಿಶೀಲಿಸಬಹುದು, ಇದು ಶೇ 100ರಷ್ಟು ಪಕ್ಕಾ ಇರುವ ಕಾಂಗ್ರೆಸ್ ರೇಟ್ ಕಾರ್ಡ್ ಎಂದು ಹೇಳಿದರು. ಜಾತಿ ಬಲ ಇದ್ದರೆ ನೀವು ಶೇ 10ರಷ್ಟು ಕಡಿಮೆ ಮಾಡಿಕೊಳ್ಳಬಹುದು. ಇಲ್ಲದೇ ಇದ್ದರೆ ಇನ್ನೂ ಶೇ 10ರಷ್ಟು ಜಾಸ್ತಿ ಕೊಡಬೇಕಾಗಿ ಬರಬಹುದು ಎಂದು ವಿಶ್ಲೇಷಿಸಿದರು. ಆದರೆ, ಈ ರೇಟ್ ಕಾರ್ಡ್ ಫಿಕ್ಸ್ ಮಾಡಿರುವುದು ಪಕ್ಕಾ. ರೇಟ್ ಕಾರ್ಡ್ ಹೀಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಬಿಎಂಪಿ ಬಿಗ್ ಶಾಕ್
ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ರೇಟ್ ಕಾರ್ಡ್ ಅನುಗುಣವಾಗಿ ಎಫ್‌ಎಆರ್ (ಫ್ಲೋರ್ ಏರಿಯ ರೇಷಿಯೋ) ಒಂದು ಚದರಡಿಗೆ 100 ರೂ, ಸಿಎಲ್‌ಯು (ಚೇಂಜ್ ಆಫ್ ಲ್ಯಾಂಡ್ ಯೂಸ್- ಭೂ ಪರಿವರ್ತನೆಗೆ) ಒಂದು ಎಕರೆಗೆ 27 ಲಕ್ಷ ಫಿಕ್ಸ್ ಆಗಿದೆ. ಗೃಹ ಇಲಾಖೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಗೆ 50 ಲಕ್ಷದಿಂದ ಒಂದು ಕೋಟಿ ಇದು, ಅದು ಜಾಗದ ಮೇಲೆ ಕಿಮ್ಮತ್ತು ಹೆಚ್ಚು ಕಡಿಮೆ ಆಗುತ್ತದೆ ಎಂದು ತಿಳಿಸಿದರು.
ಇಂಜಿನಿಯರ್‌ಗಳು, ಸಬ್ ರಿಜಿಸ್ಟರ್‌ಗಳು, ಆರ್‌ಟಿಒಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹಲವು ಹುದ್ದೆಗಳಿಗೆ 50 ಲಕ್ಷದಿಂದ 2 ಕೋಟಿ ರೂ.ವರೆಗೆ ದರ ನಿಗದಿಪಡಿಸಲಾಗಿದೆ ಎಂದು ರವಿ ಆರೋಪಿಸಿದರು.