ಕೋವಿಡ್ ಕೈಮೀರಲು ಕಾಂಗ್ರೆಸ್ಸಿಗರೇ ಕಾರಣ!

ಕೋವಿಡ್ ಕೈಮೀರಲು ಕಾಂಗ್ರೆಸ್ಸಿಗರೇ ಕಾರಣ!

ಕಲಬುರ್ಗಿ : ದೇಶದಲ್ಲಿ ಸೋಂಕು ಹೆಚ್ಚಾಗಲು ಕಾಂಗ್ರೆಸ್ಸಿಗರ ನೀಚ ರಾಜಕಾರಣವೇ ಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರುಚ್ಚರಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಈಚೆಗೆ ಮೃತಪಟ್ಟ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ದತ್ತು ತೂಗಾಂವಕರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಸಂದರ್ಭ, ನಗರದ ವಿಮಾನ ನಿಲ್ದಾಣದಲ್ಲಿ ಹೇಳಿದರು.

ಲಸಿಕೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡಿದೆ ಎಂಬ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಸತ್ಯದಿಂದ ಕೂಡಿದೆ. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಮಾಡಿದೆ ಎಂದು ಕಟೀಲ್ ಆರೋಪಿಸಿದರು.

ಫೆಬ್ರುವರಿಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರೇ ಲಸಿಕೆ ತಗೊಂಡು ಜನರಿಗೆ ಪ್ರೇರಣೆ ನೀಡಿದರು. ಆದರೂ ಜನ ಮೇ ವರೆಗೂ ಲಸಿಕೆಗಾಗಿ ಮುಂದೆ ಬರಲಿಲ್ಲ. ಈಗ ಅದೇ ಕಾಂಗ್ರೆಸ್ಸಿಗರು ಲಸಿಕೆ ಇಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಕೂಡ ಇದಕ್ಕೆ ಹೊರತಿಲ್ಲ. ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯ ಸಹ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕೆ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಅದಕ್ಕಾಗಿಯೇ ಜನ ಅವರನ್ನು ವರುಣಾ ಕ್ಷೇತ್ರದಿಂದ ಓಡಿಸಿದ್ದಾರೆ ಎಂದು ಕಟೀಲ್ ಹೇಳಿದರು.

Related