ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೊನಾ ಆತಂಕ : ಸೋಂಕಿತರ ಸಂಖ್ಯೆ ದಿನೆ ದಿನೆ ಹೆಚ್ಚಳ..!!

  • In Crime
  • June 7, 2022
  • 225 Views
ಕರ್ನಾಟಕದಲ್ಲಿ ಮತ್ತೆ ಶುರುವಾಯ್ತು ಕೊರೊನಾ ಆತಂಕ : ಸೋಂಕಿತರ ಸಂಖ್ಯೆ ದಿನೆ ದಿನೆ ಹೆಚ್ಚಳ..!!

ಬೆಂಗಳೂರು, (ಜೂನ್.07): ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ವೈರಸ್ (Coronavirsu) ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಇದರಿದ ಆತಂಕ ಮನೆಮಾಡಿದೆ.

ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ 4ನೇ ಅಲೆ (Corona 4th Wave) ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ತಜ್ಞರ ಜೊತೆ ಸಭೆ ನಡೆಸಿದೆ. ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಕೆಲ ತಜ್ಞರು, ದೇಶದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಲು ಸಲಹೆ ನೀಡಿದ್ದಾರೆ.

ಸಾರ್ವಜನಿಕರಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಕೊರೋನಾ ಮಾರ್ಗಸೂಚಿ ಮತ್ತೆ ಜಾರಿಗೊಳಿಸುವ ಬಗ್ಗೆಯೂ ತಜ್ಞರು ಸಲಹೆ ನೀಡಿದ್ದಾರೆ. ಇನ್ನು ಜಿನೋಮಿಕ್ ಸೀಕ್ವೆನ್ಸ್, ಟೆಸ್ಟಿಂಗ್ ಹೆಚ್ಚಳ ಮಾಡಬೇಕು. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಬೇಕೆಂದು ಸಲಹೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ಕೊಟ್ಟಿದ್ದಾರೆ.

Related