ಶಾಲೆ-ಕಾಲೇಜು ಪ್ರಾರಂಭಿಸಲು ಸಮ್ಮತಿ : ಡಿಸಿಎಂ

ಶಾಲೆ-ಕಾಲೇಜು ಪ್ರಾರಂಭಿಸಲು ಸಮ್ಮತಿ : ಡಿಸಿಎಂ

ಬೆಂಗಳೂರು : ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗುವುದು, ಎಂದು ಉನ್ನತ ಶಿಕ್ಷಣ ಸಚಿವ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿ, ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿ ನೀಡಿದೆ. ಅದರಂತೆ, ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ.  ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಜತೆಗೂ ಚರ್ಚಿಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು’ ಎಂದರು.

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆ ಆರಂಭಿಸಲಾಗಿದೆ ಎಂದು ಹೇಳಿದರು.

Related