ಬಿಜೆಪಿಯಿಂದ ಖರ್ಗೆ ಕುಟುಂಬಸ್ಥರ ಹತ್ಯೆಗೆ ಸಂಚು! : ಕೈ ಆರೋಪ

ಬಿಜೆಪಿಯಿಂದ ಖರ್ಗೆ ಕುಟುಂಬಸ್ಥರ ಹತ್ಯೆಗೆ ಸಂಚು! : ಕೈ ಆರೋಪ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರನ್ನು ಹತ್ಯೆ ಮಾಡಲು ಬಿಜೆಪಿ ನಾಯಕರು ಸಂಚು ರೂಪಿಸುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿಯವರ ನೀಲಿ ಕಂಗಳ ಹುಡುಗ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ರೆಕಾರ್ಡಿಂಗ್‌ನಿಂದ ಇದು ಸ್ಪಷ್ಟವಾಗಿದೆ ಎಂದಿದ್ದಾರೆ.

ಹೌದು, ಚುನಾವಣೆಗೆ ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿಯ ಸೋಲಿನ ಹತಾಶೆ ಅಪಾಯದ ಹಂತ ತಲುಪಿದ್ದು, ರಾಜ್ಯದ ದಲಿತ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಹತ್ಯೆಗೈಯ್ಯಲು ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.

ಈಚೆಗೆ ರಾಜಸ್ತಾನದ ಶಾಸಕ ಮದನ್ ದಿಲಾವರ್, ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸಿದ್ದರು. ಈಗ ಅದೇ ಬಿಜೆಪಿಯ ಚಿತ್ತಾಪುರ ಅಭ್ಯರ್ಥಿ ಮಣಿಕಂಠ ರಾಠೋಡ್, ಖರ್ಗೆ ಮತ್ತು ಅವರ ಇಡೀ ಕುಟುಂಬ ಹತ್ಯೆಗೆ ಸಂಚು ರೂಪಿಸಿರುವುದು ಬಹಿರಂಗಗೊಂಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

 

Related