ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲ , ಮುಂದೆ ಸಮಾಜ ಹಾಳಾಗಲಿದೆ – ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲ , ಮುಂದೆ ಸಮಾಜ ಹಾಳಾಗಲಿದೆ – ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಜೂ 16 :  ಬ್ರಿಟಿಷರ ಅವಧಿಯಲ್ಲಿ ಈ ರೀತಿ ನಡೆದಿರಲಿಲ್ಲ. ಇಂತಹ ನೀಚ ಕೆಲಸ ಮಾಡಿರಲಿಲ್ಲ. ಬಿಜೆಪಿ ನೀಚ ಕೆಲಸ ಮುಂದುವರೆಸಿದೆ. ಇದನ್ನು ಹೀಗೆ ಬಿಟ್ಟರೆ ಸಮಾಜ ಹಾಳಾಗಲಿದೆ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿಯನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್​ ಕೆಂಡಾಮಂಡಲವಾಗಿದ್ದು, ಸಾಲು ಸಾಲು ಪ್ರತಿಭಟನೆ ನಡೆಸುತ್ತಿದೆ.

ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್​ ನಾಯಕರು ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಕೆಪಿಸಿಸಿಯಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಲಿರುವ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರು ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಪ್ರತಿಭಟನೆಯಲ್ಲಿ ಪಕ್ಷದ ಎಲ್ಲಾ ಶಾಸಕರು, ಸಂಸದರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲ. ಪ್ರತಿಭಟನೆಯ ಹಕ್ಕನ್ನೇ ಕಿತ್ತುಕೊಳ್ಳುತ್ತಿದ್ದಾರೆ. ಹೋರಾಟದ ಹಕ್ಕು ತೆಗೆಯಲು ಸಾಧ್ಯವಿಲ್ಲ. ಸಂವಿಧಾನಕ್ಕೆ ಬಿಜೆಪಿಯವರು ಬೆಲೆ ಕೊಡುತ್ತಿಲ್ಲ. ಅವರು ದಬ್ಬಾಳಿಕೆಯನ್ನು ಮಾಡುತ್ತಿದ್ದಾರೆ. ಸಂಸದ ಡಿ.ಕೆ.ಸುರೇಶ್ ವಿರುದ್ಧ ಹೇಗೆ ನಡೆದುಕೊಂಡಿದ್ದಾರೆ. ಪ್ರಜಾಪ್ರಭುತ್ವದ ಕಕಗ್ಗೋಲೆ ನಡೆದಿದೆ. ವೇಣುಗೋಪಾಲ್ ಮೇಲೆ ಹೇಗೆ ನಡೆದುಕೊಂಡಿದ್ದಾರೆ. ಇವರಿಗೆ ತಕ್ಕ ಪಾಠ ಕಲಿಸಬೇಕು. ಆ ನಿಟ್ಟಿನಲ್ಲಿ ಕಾಂಗ್ರೆಸ್ ಹೋರಾಟಕ್ಕಿಳಿದಿದೆ. ಇವತ್ತು ಕಾಂಗ್ರೆಸ್ ಪಕ್ಷಕ್ಕೆ, ನಾಳೆ ಬೇರೆ ಪಕ್ಷಕ್ಕೆ ಆಗಲಿದೆ. ಇದನ್ನು ಎಲ್ಲರೂ ಪ್ರತಿಭಟಿಸಬೇಕು.

Related