ಕೋಟೆ ನಾಡಿನಲ್ಲಿ ಕಲುಷಿತ ನೀರು ಸೇವನೆ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

  • In State
  • August 5, 2023
  • 213 Views
ಕೋಟೆ ನಾಡಿನಲ್ಲಿ ಕಲುಷಿತ ನೀರು ಸೇವನೆ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಚಿತ್ರದುರ್ಗ: ಜುಲೈ 31ರಂದು ಕಲುಷಿತ ನೀರು ಸೇವಿಸಿ 5 ಜನ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ನಡೆದಿದೆ. ಜೊತೆಗೆ ಸುಮಾರು 100 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಮೃತರ ಸಂಖ್ಯೆ ನಿನ್ನೆ ಐದಕ್ಕೆ ಏರಿಕೆಯಾಗಿದೆ..

ಕಲುಷಿತ ನೀರು ಸೇವಿಸಿ ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ. ಓರ್ವ ಗರ್ಭಿಣಿಯ ಗರ್ಭಪಾತವಾಗಿದೆ. 25 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 155 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಗಸ್ಟ 3 ರಂದು ಪ್ರಯೋಗಾಲಯ ವರದಿ ಬಂದಿದ್ದು, ಕಾಲರಾ ಮಾದರಿಯ ಸೂಕ್ಷ್ಮಾಣು ಅಂಶ ಪತ್ತೆಯಾಗಿತ್ತು. ವಾಂತಿ, ಭೇದಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಿದ್ದು, ಈ ನೀರು ಕುಡಿಯಲು ಯೋಗ್ಯವಲ್ಲವೆಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಘಟಕ ವರದಿಯಲ್ಲಿ ಉಲ್ಲೇಖಿಸಿತ್ತು. ಇದೀಗ ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಾಕಿಯಿದೆ.

 

Related