ಡೆಂಗ್ಯೂ ತಡೆಗೆ ಸಹಕರಿಸಿ

ಡೆಂಗ್ಯೂ ತಡೆಗೆ ಸಹಕರಿಸಿ

ಮುದ್ದೇಬಿಹಾಳ : ಯಾವುದೇ ಜ್ವರ ವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಿರಿ ಎಂದು ಕೀಟಶಾಸ್ತ್ರಜ್ಞ ರಿಯಾಜ್ ದೇವರಳ್ಳಿ ಹೇಳಿದರು.

ಪಟ್ಟಣದ ಆಶ್ರಯ ಕಾಲೋನಿಯಲ್ಲಿ ರಾಷ್ಟ್ರೀಯ ಡೆಂಗ್ಯೂ ರೋಗ ದಿನಾಚರಣೆ ಕಾರ್ಯಕ್ರಮನ್ನು ಉದ್ಘಾಟಿಸಿದ ಮಾತನಾಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಜೈಬುನಿಸಾ ಬೀಳಗಿ ಮಾತನಾಡಿ, ತಾಲೂಕಿನಾದ್ಯಂತ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಮನೆಗಳಿಗೆ ಬಂದಾಗ ಸಾರ್ವಜನಿಕರು ಸಹಕಾರ ನೀಡಿ ಮನೆಗಳಲ್ಲಿ ಲಾರ್ವಾ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಆಶ್ರಯ ಕಾಲೋನಿಯ ಸುಮಾರು 20 ಕುಟುಂಬದವರಿಗೆ ಸಾಂಕೇತಿಕವಾಗಿ ಸೊಳ್ಳೆ ಪರದೆಯನ್ನು ವಿತರಿಸಲಾಯಿತು. 600 ಮನೆಗಳಿಗೂ ಸೊಳ್ಳೆ ಪರದೆ ವಿತರಿಸಲಾಗುವುದು ಎಂದು ಡಾ.ಬೀಳಗಿ ತಿಳಿಸಿದರು.

Related