ಕೊರೊನಾ ಗಾಳಿ ಸುದ್ದಿಗೆ ಕಿವಿಗೊಡಬೇಡಿ

ಕೊರೊನಾ ಗಾಳಿ ಸುದ್ದಿಗೆ ಕಿವಿಗೊಡಬೇಡಿ

ಬೆಂಗಳೂರು, ಮಾ.4 : ಕೊರೊನಾ ವೈರಸ್ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಜನರಲ್ಲಿ ಮನವಿ ಮಾಡಿದ್ದಾರೆ.
40207 ಪ್ರಯಾಣಿಕರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. 251 ಜನರ ರಕ್ತ ಪರೀಕ್ಷೆ ನಡೆಸಲಾಗಿದ್ದು, 238 ನೆಗೆಟಿವ್ ಎಂದು ವರದಿ ಬಂದಿದೆ. ಉಳಿದ 13 ಜನರ ವರದಿ ಇನ್ನಷ್ಟೇ ಬರಬೇಕಿದೆ.
ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಯಾವುದೇ ಗಾಳಿಸುದ್ದಿಗೆ ಕಿವಿಗೊಡದೆ, ಅಧಿಕೃತ ಮಾಹಿತಿಯನ್ನು ಮಾತ್ರ ಪರಿಗಣಿಸಿ ಎಂದು ಕೋರುತ್ತೇನೆ. ನಮ್ಮ ಸರ್ಕಾರ ಹಾಗೂ ಇಲಾಖೆ ಸೋಂಕು ಹರಡದಂತೆ ಎಲ್ಲಾ ಕ್ರಮ ಕೈಗೊಂಡಿದೆ.
ಸರ್ಕಾರ ಹಾಗೂ ಇಲಾಖೆ ಸೋಂಕು ಹರಡದಂತೆ ಎಲ್ಲಾ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Related