ಕಿಲ್ಲರ್ ಕೊರೋನಾ ಆರ್ಭಟ: ರಾಜ್ಯ ಲಾಕಾ? ಸೀಲಾ?

ಕಿಲ್ಲರ್ ಕೊರೋನಾ ಆರ್ಭಟ: ರಾಜ್ಯ ಲಾಕಾ? ಸೀಲಾ?

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮತ್ತೊಮ್ಮೆ ರಾಜ್ಯದಲ್ಲಿ ಲಾಕ್ ಡೌನ್ ವಿಧಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ವೈರಸ್ ಸೋಂಕು ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಿರುವ ಪ್ರದೇಶಗಳಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವರ ಜೊತೆ ನಡೆದ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಲಾಕ್ ಡೌನ್ ಕುರಿತ ತಜ್ಞರ ಸಮಿತಿಯು ಕೊರೋನಾ ಸೋಂಕು ಪ್ರಕರಣಗಳು ಗಂಭೀರ ಪ್ರಮಾಣದಲ್ಲಿ ಹೆಚ್ಚಾದರೆ ಲಾಕ್ ಡೌನ್ ಮುಂದುವರಿಕೆ ಅಸ್ತ್ರದ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆನ್ನಲಾಗಿದೆ.

ಹೆಚ್ಚಿದ ಲಾಕ್‍ಡೌನ್ ಒತ್ತಡ

ಹೆಚ್ಚುತ್ತಿರುವ ಕೊರೋನಾ ಸೋಂಕಿನ ನಡುವೆಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುತ್ತೇನೆಂದು ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ, ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್, ವಿಧಾನ ಪರಿಷತ್ ಸದಸ್ಯ ಬಿಕೆ. ಹರಿಪ್ರಸಾದ್, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಪರೀಕ್ಷೆ ರದ್ದುಗೊಳಿಸಿ ಮಕ್ಕಳ ಪ್ರಾಣ ಉಳಿಸಿ ಎಂಬಿತ್ಯಾದಿಯಾಗಿ ಯಡಿಯೂರಪ್ಪ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಾಕ್ ಡೌನ್ ಮಾಡಿ ಜನರ ಪ್ರಾಣ ಉಳಿಸಿ ಎಂದು ಒತ್ತಡ ಹಾಕುತ್ತಿದ್ದಾರೆ.

Related