ಕೊರೋನಾ : ಖಾಸಗಿ ಆಸ್ಪತ್ರೆಯಿಂದ ಹಣ ಲೂಟಿ

ಕೊರೋನಾ : ಖಾಸಗಿ ಆಸ್ಪತ್ರೆಯಿಂದ ಹಣ ಲೂಟಿ

ಚಿತ್ರದುರ್ಗ : ಕೋವಿಡ್ ಚಿಕಿತ್ಸೆ ನೀಡುವ ನೆಪದಲ್ಲಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ಹಣ ವಸೂಲಿ ಮಾಡುತ್ತಿವೆ ಎಂದು ವಿಧಾನಪರಿಷತ್ ಸದಸ್ಯ ಜಿ. ರಘು ಆಚಾರ್ ಆರೋಪಿಸಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರ ಬರೆದಿರುವ ರಘು ಆಚಾರ್, ಕೊರೋನಾ ನಿಯಂತ್ರಣ ಕಾರ್ಯಪಡೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

‘ರಾಜ್ಯದಲ್ಲಿ ನಿತ್ಯ ಸರಾಸರಿ ಏಳು ಸಾವಿರ ಕೋವಿಡ್ ಪ್ರಕರಣ ವರದಿಯಾಗುತ್ತಿವೆ. ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ, ಸೂಕ್ತ ಚಿಕಿತ್ಸೆಯನ್ನೂ ನೀಡುತ್ತಿಲ್ಲ. ಇದರಿಂದ ಸಾವಿರಾರು ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕಕ್ಕಿಂತ ವಸೂಲಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಖಾಸಗಿ ಆಸ್ಪತ್ರೆಗಳು ಸ್ಪಷ್ಟವಾಗಿ ಉಲ್ಲಂಘಿಸುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related