ಕೃಷ್ಣಾಗೆ ಕೊರೋನಾ ಭೀತಿ

ಕೃಷ್ಣಾಗೆ ಕೊರೋನಾ ಭೀತಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾಗೂ ಮಾರಕ ಕೊರೊನಾ ಭೀತಿ ಆವರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್ ಆಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಪತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮಹಿಳೆ ಪೊಲೀಸ್ ಪೇದೆ ಕಳೆದ ಕೆಲ ದಿನಗಳಿಂದ ಗೃಹ ಕಚೇರಿ ಕೃಷ್ಣಾದಲ್ಲೇ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಸ್ಥಳದಲ್ಲಿ ಕೊರೊನಾ ಆತಂಕ ನಿರ್ಮಾಣವಾಗಿದೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ಕಚೇರಿಯನ್ನು ಸ್ಯಾನಿಟೈಸ್ ಮಾಡಾಗುತ್ತಿದ್ದು, ಗೃಹ ಕಚೇರಿಗೆ ಪ್ರವೇಶ ನಿರಾಕರಿಸಲಾಗಿದೆ. ಸಿಎಂ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆಯನ್ನು ಪ್ರಕಟಿಸಲಾಗಿದೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಪೊಲೀಸ್ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್‌ಲೆಸ್ ತರಬೇತಿ ಶಾಲೆ ಉದ್ಘಾಟನೆ ಕಾರ್ಯಕ್ರಮ ನಿಗದಿಯಾಗಿತ್ತು. ಅ ಬಳಿಕ 11.30 ಕ್ಕೆ ಕೊರೋನಾ ಹಾಗೂ ಇನ್ನಿತರ ಆಡಳಿತಾತ್ಮಕ ವಿಚಾರಗಳಿಗೆ ಸಂಬAಧಿಸಿದAತೆ ಚರ್ಚೆ ನಡೆಸಲು ಹಿರಿಯ ಅಧಿಕಾರಿಗಳೊಂದಿಗೆ ಬಿಎಸ್‌ವೈ ಸಭೆ ನಡೆಯಬೇಕಿತ್ತು. ಆದರೆ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೋನಾ ಮುಂಜಾಗರೂಕತಾ ಕ್ರಮವಾಗಿ ಸ್ಯಾನಿಟೈಸಿಂಗ್ ಮಾಡುತ್ತಿರುವ ಕಾರಣ ವಿಧಾನಸೌಧಕ್ಕೆ ಸ್ಥಳಾಂತರಿಸಲಾಯಿತು.

Related