ಸುರಪುರ ಶಾಸಕ ರಾಜುಗೌಡಗೂ ಕೊರೋನಾ ಪಾಸಿಟಿವ್

ಸುರಪುರ ಶಾಸಕ ರಾಜುಗೌಡಗೂ ಕೊರೋನಾ ಪಾಸಿಟಿವ್

ಸುರಪುರ: ಜಿಲ್ಲೆಯ ಸುರಪುರ ಕ್ಷೇತ್ರದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ನರಸಿಂಹ ನಾಯಕ ರಾಜುಗೌಡ ಅವರಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಈ ವೇಳೆ ಮಾತನಾಡಿ. ಪ್ರಾಥಮಿಕ ವರದಿಯಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಅಂತಹ ಗಂಭೀರ ಲಕ್ಷಣಗಳಿಲ್ಲ. ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಗುಣಮುಖನಾಗಿ ಜನ ಸೇವೆಗೆ ಮರಳುತ್ತೇನೆ. ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಆತಂಕಗೊಳ್ಳುವ ಅಗತ್ಯವಿಲ್ಲ. ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಏ.17ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಗದಿಯಂತೆ ನಡೆಯಲಿದ್ದು, ಕಂದಾಯ ಸಚಿವ ಆರ್. ಅಶೋಕ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Related