ಜಿಲ್ಲಾಧಿಕಾರಿಗೆ ಕೊರೋನಾ ಪಾಸಿಟಿವ್

ಜಿಲ್ಲಾಧಿಕಾರಿಗೆ ಕೊರೋನಾ ಪಾಸಿಟಿವ್

ಬೀದರ್ : ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಡಪಟ್ಟಿದೆ.

ಕಳೆದ ಮೂರು ತಿಂಗಳಿಂದ ರಾಮಚಂದ್ರನ್ ಅವರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ, ಸೋಂಕಿತರಿಗೆ ಉತ್ತಮ ಚಿಕಿತ್ಸೆ ಸಿಗುವುದು ಸೇರಿದಂತೆ ಈ ವಿಪತ್ತಿನ ಪರಿಸ್ಥಿತಿಯ ನಿರ್ವಹಣಾ ಕಾರ್ಯದಲ್ಲಿ ನಿರತರಾಗಿದ್ದರು.

ಈ ವೇಳೆ ಯಾರದೋ ಸಂಪರ್ಕದಿಂದ ಇವರಿಗೆ ಸೋಂಕು ಅಂಟಿದೆ. ಇವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು, ಬ್ರಿಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Related