ರಾಜ್ಯದಲ್ಲಿ ಜೋಡೆತ್ತುಗಳ ಪಟ್ಟಾಭಿಷೇಕ

ರಾಜ್ಯದಲ್ಲಿ ಜೋಡೆತ್ತುಗಳ ಪಟ್ಟಾಭಿಷೇಕ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಬಹುಮತದಿಂದ ಗೆದ್ದು ತನ್ನ ನಗೆಯನ್ನು ಬೀರಿದೆ. ಕಳೆದ ಐದಾರು ದಿನಗಳಿಂದ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು ಇಂದು ಸಿದ್ದರಾಮಯ್ಯ ಅವರು ರಾಜ್ಯದ 24ನೆಯ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಹೌದು, ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಇಂದು ಮಧ್ಯಾಹ್ನ 12.30ಕ್ಕೆ ರಾಜ್ಯದ ಸಿಎಂ ಆಗಿ ಎರಡನೇ ಬಾರಿ ಸಿದ್ದರಾಮಯ್ಯ ಹಾಗೂ ಮೊದಲ ಬಾರಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಇಬ್ಬರೂ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

10 ಮಂದಿ ಪ್ರಮಾಣವಚನ: ಕಾಂಗ್ರೆಸ್​​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Related