ಗಂಡು ಮಗುವಿಗೆ ಜನ್ಮ ನೀಡಿದ ಕೊರೋನ ಪೀಡಿದ ಮಹಿಳೆ

ಗಂಡು ಮಗುವಿಗೆ ಜನ್ಮ ನೀಡಿದ ಕೊರೋನ ಪೀಡಿದ ಮಹಿಳೆ

ನವದೆಹಲಿ, ಏ. 04: ಇತ್ತೀಚಿನ ದಿನಗಳಲ್ಲಿ ದೇಶಾದ್ಯಾಂತ ಮಾಹಾಮಾರಿ ಕೊರೋನ ವೈರಸ್ ತನ್ನ ಅಟ್ಟಹಾಸದಿಂದ ಮೆರೆಯುತ್ತಿದೆ. ಇದರಿಂದ ದಿನೇ ದಿನೇ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಇದುವರೆಗೆ 2,902 ಕೊರೊನಾ ವೈರಸ್ ಸೋಂಕು ತಗುಲಿದೆ. ಅಲ್ಲದೇ ಈಗಾಗಲೇ 91 ಜನರು ಕೊರೊನಾ ವೈರಸ್ ಸೋಂಕಿನಿಂದಾಗಿ ಬಲಿಯಾಗಿದ್ದಾರೆ. ಈ ನಡುವೆ ಕೊರೊನಾ ವೈರಸ್ ಸೋಂಕಿತ ಮಹಿಳೆಯೊಬ್ಬರು ಆರೋಗ್ಯವಂತ ಗಂಡು ಮಗುವಿಗೆ ಜನ್ಮನೀಡಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು, ಕೊರೊನಾ ಪೀಡಿತ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಂತವಾಗಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ಕೊರೊನಾ ವೈರಸ್ ಪೀಡಿತ ಮಹಿಳೆ ಆರೋಗ್ಯ ವಂತ ಮಗುವಿಗೆ ಜನ್ಮ ನೀಡಿ, ಹೊಸ ಇತಿಹಾಸ ಸೃಷ್ಠಿಸಿದ್ದಾರೆ.

 

Related