ಕಾಮಗಾರಿಗಳ ಶಂಕುಸ್ಥಾಪನೆ

  • In State
  • August 30, 2021
  • 424 Views
ಕಾಮಗಾರಿಗಳ ಶಂಕುಸ್ಥಾಪನೆ

ಶಹಾಪುರ : ನಗರದ ಕೃಷಿ ಮಾರಾಟ ಇಲಾಖೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ವಿವಿಧ ಮೂಲಭೂತ ಸೌಕರ್ಯ ಒದಗಿಸುವ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲು, ಮಂಗಳವಾರ ಬೆಳಿಗ್ಗೆ 11.30ಕ್ಕೆ ರಾಜ್ಯದ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಸಚಿವ ಎಸ್.ಟಿ. ಸೋಮಶೇಖರ್ ಆಗಮಿಸಲಿದ್ದಾರೆ ಎಂದು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ವೀರಣ್ಣ ಸಾಹು ತಡಬಿಡಿ ತಿಳಿಸಿದ್ದಾರೆ.

ಈ ವೇಳೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಸಂಸದ ಅಮರೇಶ್ ನಾಯಕ, ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಡಾ. ಚಂದ್ರಶೇಖರ ಪಾಟೀಲ,ಬಿ.ಜಿ.ಪಾಟೀಲ ಮುಖ್ಯ, ನಗರಸಭೆ ಅಧ್ಯಕ್ಷೆ ಶಹನಾಜ್ ಬೇಗಂ ದರ್ಬಾನ್, ಎಪಿಎಂಸಿ ಉಪಾಧ್ಯಕ್ಷ ಸಂತೋಷಕುಮಾರ್ ನಿರ್ಮಲ್ಕರ್ ಭಾಗವಹಿಸಲಿದ್ದಾರೆ.

Related