ಭ್ರಷ್ಟಾರದಲ್ಲಿ ಮುಳುಗಿರುವ ಸರ್ಕಾರ ರಾಜ್ಯದಲ್ಲಿದೆ: ಬೊಮ್ಮಾಯಿ

ಭ್ರಷ್ಟಾರದಲ್ಲಿ ಮುಳುಗಿರುವ ಸರ್ಕಾರ ರಾಜ್ಯದಲ್ಲಿದೆ: ಬೊಮ್ಮಾಯಿ

ಗದಗ: ಕರ್ನಾಟಕ ರಾಜ್ಯದಲ್ಲಿ ಆಡಳಿತ ಪಕ್ಷದ ಮೇಲೆ ವಿರೋಧ ಪಕ್ಷದ ನಾಯಕರುಗಳು ಒಂದಲ್ಲ ಒಂದು ಆರೋಪ ಮಾಡುತ್ತಿದ್ದು, ಇದೀಗ ವಾಲ್ಮೀಕಿ ಮಹರ್ಷಿ ನಿಗಮದಲ್ಲಿ ಹಣ ದುರುಪಯೋಗ ಆಗಿರುವುದರಿಂದ ಮತ್ತೆ ವಿರೋಧ ಪಕ್ಷದ ನಾಯಕರುಗಳು ಆಡಳಿತ ಪಕ್ಷದ ಮೇಲೆ ಕೆಂಡಮಂಡಲವಾಗುತ್ತಿದ್ದಾರೆ.

ಹೌದು, ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಕೋಟಿಗಟ್ಟಲೆ ಹಣ ಅವ್ಯವಹಾರವಾಗಿರುವುದರಿಂದ  ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರುಗಳು ಆರೋಪಗಳ ಸುರಿಮಳೆನೇ ಸುರಿಸುತ್ತಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಸಚಿವ ಬಿ ನಾಗೇಂದ್ರ ಅವರ ಕೈವಾಡವಿದೆ ಹಾಗಾಗಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಈಗಾಗಲೇ ರಾಜ್ಯದಾದ್ಯಂತ ಪ್ರತಿಭಟನೆಯನ್ನು ಮಾಡುತ್ತಿರುವ ವಿರೋಧಪಕ್ಷಗಳು.

ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ: ಡಿಸಿಎಂ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕ್ಯಾಬಿನೆಟ್‌ ಭ್ರಷ್ಟಾಚಾರದಲ್ಲಿ ಮುಳಗಿರುವುದರಿಂದ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಸಿಎಂ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರ ಪ್ರೋತ್ಸಾಹಿಸುವ, ಭ್ರಷ್ಟಾರದಲ್ಲಿ ಮುಳುಗಿರುವ ಸರ್ಕಾರ ರಾಜ್ಯದಲ್ಲಿದೆ. ಎಸ್ಸಿ,ಎಸ್ಟಿ‌ ಉದ್ಧಾರ ಮಾಡುತ್ತೇವೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತದೆ, ಅವರ ಮೀಸಲಾತಿ ಹೆಚ್ಚಳದಲ್ಲೂ ಯಾವುದೇ ದಿಟ್ಟ ಕ್ರಮ ತೆಗೆದುಕೊಂಡಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಆ ಕ್ರಮ ತೆಗೆದುಕೊಂಡಿದ್ದೇನೆ ಎಂದರು.

ಎಸ್ಟಿಪಿ, ಟಿಎಸ್ಪಿ ಅಡಿ ಪರಿಶಿಷ್ಟರಿಗೆ ಇಟ್ಟ ಹಣವನ್ನು ಗ್ಯಾರಂಟಿಗೆ ಡೈವರ್ಟ್ ಮಾಡಿದ್ದಾರೆ. ಕಳೆದ ವರ್ಷ ₹ 11 ಸಾವಿರ ಕೋಟಿ, ಈಗ ₹13 ಸಾವಿರ ಕೋಟಿ ಡೈವರ್ಟ್ ಮಾಡುತ್ತಿದ್ದಾರೆ. ವಾಲ್ಮೀಕಿ ನಿಗಮಕ್ಕೆ ಕೊಟ್ಟ ಹಣ ಎಸ್ಟಿ ಜನಾಂಗಕ್ಕೆ ಉಪಯೋಗವಾಗಬೇಕಿತ್ತು. ಆ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

 

Related