ಕೊರೊನಾ ಸೋಂಕಿಗೆ 6 ಮಂದಿ ಬಲಿ, 6594 ಹೊಸ ಕೇಸ್ ಗಳು ಪತ್ತೆ..!

  • In Crime
  • June 15, 2022
  • 312 Views
ಕೊರೊನಾ ಸೋಂಕಿಗೆ 6 ಮಂದಿ ಬಲಿ, 6594 ಹೊಸ ಕೇಸ್ ಗಳು ಪತ್ತೆ..!

ನವದೆಹಲಿ (ಜೂ.15): ದೇಶದಲ್ಲಿ ದೈನಂದಿನ ಕೋವಿಡ್ಪ್ರಕರಣಗಳ ಸಂಖ್ಯೆ ಸ್ವಲ್ಪಮಟ್ಟಿಗೆ ತಗ್ಗಿದ್ದು, ಮಂಗಳವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 6,594 ಪ್ರಕರಣಗಳು ದಾಖಲಾಗಿದ್ದು, 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ತನ್ಮೂಲಕ ಒಟ್ಟು ಪ್ರಕರಣಗಳು 4.32 ಕೋಟಿಗೆ, ಒಟ್ಟು ಸಾವು 5.24 ಲಕ್ಷಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,553 ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಸಕ್ರಿಯ ಸೋಂಕಿನ ಸಂಖ್ಯೆ 50,548ಕ್ಕೆ ಏರಿಕೆಯಾಗಿದೆ. ಇನ್ನು ದೈನಂದಿನ ಪಾಸಿಟಿವಿಟಿ ದರ ಶೇ.2.05 ಮತ್ತು ವಾರದ ಪಾಸಿಟಿವಿಟಿ ದರ ಶೇ.2.32ರಷ್ಟಿದೆ. ದೇಶದಲ್ಲಿ ಈವರೆಗೆ 195.35 ಕೋಟಿ ಡೋಸ್ಲಸಿಕೆ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರ 2956, ದಿಲ್ಲಿಯಲ್ಲಿ 1118 ಕೋವಿಡ್ಕೇಸು: ರಾಷ್ಟ್ರರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ದೈನಂದಿನ ಕೋವಿಡ್ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಮಂಗಳವಾರ ದೆಹಲಿಯಲ್ಲಿ 1,118 ಪ್ರಕರಣಗಳು ದಾಖಲಾಗಿವೆ. ಸೋಮವಾರಕ್ಕೆ ಹೋಲಿಸಿದರೆ 504 ಪ್ರಕರಣಗಳು ಹೆಚ್ಚಾಗಿವೆ. ಇದೇ ಅವಧಿಯಲ್ಲಿ ಇಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ.

ಇನ್ನೂ ಮಹಾರಾಷ್ಟ್ರದಲ್ಲಿ 2,956 ಪ್ರಕರಣಗಳು ದಾಖಲಾಗಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. ಸೋಮವಾರಕ್ಕಿಂತ 1,071 ಪ್ರಕರಣಗಳು ಹೆಚ್ಚಾಗಿವೆ. ಇನ್ನು ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ.6.5ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18 ಸಾವಿರಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ಮತ್ತಿಬ್ಬರು ಸೋಂಕಿತರಲ್ಲಿ ಒಮಿಕ್ರೋನ್ನ ರೂಪಾಂತರಿಯಾದ ಬಿಎ.5 ಸೋಂಕು ಕಾಣಿಸಿಕೊಂಡಿದೆ.

Related