ಕೋವಿಡ್-19; ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ!

ಕೋವಿಡ್-19; ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನ ಹೆಚ್ಚಾಗುತ್ತಿರುವುದರಿಂದ ರಾಜ್ಯದ ಜನತೆಯಲ್ಲಿ ಮತ್ತೆ ಆತಂಕ ಮನೆ ಮಾಡಿದ್ದು ಶಾಲಾ ಮಕ್ಕಳಿಗೆಂದು ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದವರು, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೋವಿಡ್ 19 ಬಗ್ಗೆ ಉನ್ನತ ಸಭೆಯನ್ನು ನಡೆಸಿದ್ದೇವೆ. ಇನ್ನು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಶಾಲಾ ಮಕ್ಕಳಿಗೆ ಎಂದು ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಶಾಲಾ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ವಿಚಾರವಾಗಿ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕ್ಯಾಬಿನೆಟ್ ಸಬ್ ಕಮಿಟಿ ರಚಿಸಿ ಅಲ್ಲಿ ತೀರ್ಮಾನ ಮಾಡಲಾಗುತ್ತೆ. ಮಕ್ಕಳು ಮಾಸ್ಕ್ ಹಾಕಿಕೊಂಡರೆ ಒಳ್ಳೆಯದು ಅಲ್ವಾ ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ RT-PCR ದರ ನಿಗದಿ ಮಾಡುವ ವಿಚಾರವಾಗಿ ಮಾತನಾಡಿದ್ದು, ಕ್ಯಾಬಿನೆಟ್ ಉಪಸಮಿತಿಯಲ್ಲಿ ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ಎಲ್ಲೆಡೆ ಟೆಸ್ಟ್ ಮಾಡಿಸಲು ಮುಂದಾದರೆ ಮತ್ತೆ ಜಾಸ್ತಿ ಆಗಬಹುದು ಎಂದಿದ್ದಾರೆ

Related