ಕಂಟೈನರುಗಳಲ್ಲಿ ಕೋವಿಡ್ ಐಸಿಯು

ಕಂಟೈನರುಗಳಲ್ಲಿ ಕೋವಿಡ್ ಐಸಿಯು

ಆಂಕರ್: ಕಂಟೈನರ್‍ನಲ್ಲಿ ಕೋವಿಡ್ ಐಸಿಯು ಅಭಿವೃದ್ಧಿ ಪಡಿಸಲಾಗಿದ್ದು, ಬೆಂಗಳೂರಿನಲ್ಲಿ ಮೊದಲ ಪ್ರಯೋಗ ಎಂದು ಡಿಸಿಎಂ ಅಶ್ವಥ್ ಣಾರಾಯಣ್ ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಮಾನ್ಯವಾಗಿ ಹಡಗುಗಳಲ್ಲಿ ಸರಕು ಸಾಗಣೆಗೆ ಬಳಸಲಾಗುವ ಬೃಹತ್ ಗಾತ್ರದ ಕಂಟೈನರುಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ಐಸಿಯುಗಳನ್ನು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಪರಿಶೀಲನೆ ನಡೆಸಿದರು.

ಶಸ್ತ್ರಚಿಕಿತ್ಸಾ ಘಟಕ ಹಾಗೂ ಕ್ಲೀನ್ ರೂಮುಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಸರಾಗಿರುವ ಬೆಂಗಳೂರು ಮೂಲದ ರಿನ್ಯಾಕ್ ಎಂಬ ಕಂಪನಿ ’ಮಾಡ್ಯೂಲರ್ ಐಸಿಯು’ಗಳನ್ನು ಅಭಿವೃದ್ಧಿಪಡಿಸಿದೆ. ಇವಗಳನ್ನು ’ಮೊಬೈಲ್ ಐಸಿಯು’ಗಳೆಂದೂ ಕರೆಯಬಹುದಾಗಿದೆ.

ಕಂಟೈನರುಗಳಲ್ಲಿ ಐಸಿಯು ಮಾಡಬಹುದು ಎಂಬ ಆಲೋಚನೆಯೇ ವಿನೂತನವಾಗಿದೆ. ದೇಶದಲ್ಲೇ ಮೊತ್ತಮೊದಲ ಬಾರಿಗೆ ಇಂಥ ತುರ್ತು ಚಿಕಿತ್ಸಾ ಘಟಕಗಳನ್ನು ನಮ್ಮ ರಾಜ್ಯದಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Related