7 ತಿಂಗಳ ಗರ್ಭಿಣಿ ಕೋವಿಡ್‌ಗೆ ಬಲಿ

7 ತಿಂಗಳ ಗರ್ಭಿಣಿ ಕೋವಿಡ್‌ಗೆ ಬಲಿ

ಮಂಗಳೂರು : ಜಿಲ್ಲೆಯ ಎಸ್‌ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್‌ಐ ಆಗಿ ಕರ್ತವ್ಯ ನಿಭಾಯಿಸುತ್ತಿದ್ದ ಶಾಮಿಲಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಈ ಕುರಿತು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು, ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.

(24) ಪ್ರೊಬೆಷನರಿ ಪಿಎಸ್‌ಐ ಶಾಮಿಲಿ ಮೂಲತಃ ಕೋಲಾರದವರು. ಜನವರಿ 11 ರಂದು ಮಂಗಳೂರು ಎಸ್‌ಪಿ ಕಚೇರಿಯಲ್ಲಿ ಸೇವೆ ಆರಂಭಿಸಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದ ಅವರು, ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ಮರಳಿದ್ದರು.

ಬಳಿಕ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಮೇ 2 ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ನಿಧನರಾಗಿದ್ದಾರೆ.

ಗರ್ಭಿಣಿಯಾಗಿದ್ದ ಕಾರಣ ಅವರು ಕೋವಿಡ್ ಲಸಿಕೆ ಪಡೆದುಕೊಂಡಿರಲಿಲ್ಲ ಎನ್ನಲಾಗಿದೆ.

Related