ಕೋವಿಡ್ ರೋಗಿಗಳ ದೂರು ; ಡಿಸಿ ದಿಢೀರ್ ಭೇಟಿ

ಕೋವಿಡ್ ರೋಗಿಗಳ ದೂರು ; ಡಿಸಿ ದಿಢೀರ್ ಭೇಟಿ

ಧಾರವಾಡ : ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.

ಬ್ರಿಮ್ಸ್ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲ, ಬೆಡ್‌ಗಳ ಲಭ್ಯತೆ ಇಲ್ಲ ಎಂಬುದು ಸುಳ್ಳು ವದಂತಿಯಾಗಿದೆ. ಬ್ರಿಮ್ಸ್ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ 50ಕ್ಕೂ ಹೆಚ್ಚು ಕೋವಿಡ್ ಬೆಡ್‌ಗಳು ಲಭ್ಯತೆ ಇದೆ.

ಆಕ್ಸಿಜನ್ ಸರಬರಾಜು ಇದೆ. ರೆಮ್‌ಡಿಸಿವರ್ ಇಂಜೆಕ್ಷನ್ ಲಭ್ಯತೆ ಇದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ರತಿಕಾಂತ ಸ್ವಾಮಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. “ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು” ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ತಾಲೂಕು ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೀದರ್‌ನ ಬ್ರಿಮ್ಸ್ಗೆ ಸೂಚಿಸಿದ್ದಲ್ಲಿ ಮಾತ್ರ ಇಲ್ಲಿ ಬಂದು ದಾಖಲಾತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಜನರಿಗೆ ಕರೆ ನೀಡಿದರು.

ಜನರು ಕೋವಿಡ್ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ಕೋವಿಡ್ ಪಾಸಿಟಿವ್ ವರದಿಯಾದ ಕೂಡಲೇ ನೇರವಾಗಿ ಬ್ರಮ್ಸ್ಗೆ ಬರದೇ ತಮ್ಮ ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪ್ರಾಥಮಿಕ ತಪಾಸಣೆಗೆ ಒಳಗಾಗಿ, ಬಳಿಕ ತಾಲೂಕು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

Related