ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ

ಮಕ್ಕಳ ಸ್ನೇಹಿ ವಾತಾವರಣ ನಿರ್ಮಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ

ಮುದ್ದೇಬಿಹಾಳ : ವೈರಸ್‌ನ ಹರಡುವಿಕೆ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷಾ ಪ್ರಾರಂಭಕ್ಕಿAತ ಮುನ್ನದ ಚಟುವಟಿಕೆಗಳು ಮಕ್ಕಳ ಸ್ನೇಹಿಯಾಗಿರುವಂತೆ ನೋಡಿಕೊಂಡು ಭಯಮುಕ್ತರಾಗಿ, ನಕಲುಮುಕ್ತವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವಂತೆ ನೋಡಿಕೊಳ್ಳಬೇಕು, ವಿಜಯಪುರ ಡಿಡಿಪಿಐ ಕಛೇರಿಯ ಡಿವೈಪಿಸಿ, ತಾಲೂಕಾ ನೋಡಲ್ ಅಧಿಕಾರಿ ಆರೀಫ ಬಿರಾದಾರ ಹೇಳಿದರು.

ಪಟ್ಟಣದ ಪಟ್ಟಣದ ಜವಾಹರಲಾಲ್ ನೆಹರು ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಎಣಿಕೆ ಏಜೆಂಟರು, ಪಕ್ಷಗಳ ಮುಖಂಡರನ್ನು ಗುರುತಿನ ಚೀಟಿ ನೋಡಿಕೊಂಡು ಕೇಂದ್ರದೊಳಕ್ಕೆ ಬಿಡುವಂತೆ ಪರೀಕ್ಷಾ ಕೇಂದ್ರದಲ್ಲೂ ಅದೇ ಪದ್ಧತಿ ಅನುಸರಿಸಿ ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದು ಹೇಳಿದರು.

ತಹಸೀಲ್ದಾರ್ ಜಿ.ಎಸ್.ಮಳಗಿ, ತಾಳಿಕೋಟಿ, ತಹಶೀಲ್ದಾರ್ ಅನಿಲಕುಮಾರ ಢವಳಗಿ ಮಾತನಾಡಿ, ಸೂಕ್ತ ಆರೋಗ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ ನಿಷೇಧಿತ ಪ್ರದೇಶವೆಂದು 144 ಕಲಂನ್ನು ಜಾರಿಗೊಳಿಸಲಾಗಿರುತ್ತದೆ. ಪರೀಕ್ಷೆಗೆ ಸಂಬಂಧಪಟ್ಟ ವ್ಯಕ್ತಿಗಳನ್ನು ಹೊರತುಪಡಿಸಿ ಬೇರೆಯವರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದಿಲ್ಲ ಎಂದು ಹೇಳಿದರು.

ಒಂದೊಂದು ಪರೀಕ್ಷಾ ಕೇಂದ್ರದಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಎಲ್ಲರಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಲು ಸಮಯಾವಕಾಶದ ಅಗತ್ಯತೆ ಇದೆ.  ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು 8.30 ರಿಂದ 9 ಗಂಟೆಯೊಳಗಾಗಿ ಕೇಂದ್ರದಲ್ಲಿ ಹಾಜರಿರಬೇಕು.

ಪ್ರತಿಯೊಂದು ಕೊಠಡಿಗೂ ಸಿಸಿ ಕ್ಯಾಮೆರಾ ಅಳವಡಿಕೆಯಾಗಿರುತ್ತದೆ.ಒಬ್ಬರು ಮೊಬೈಲ್ ಸ್ವಾಧೀನಾಧಿಕಾರಿಗಳು ಕೇಂದ್ರದಲ್ಲಿರಲಿದ್ದು ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಓರ್ವ ಎ.ಎಸ್.ಐ ಮೂವರು ಪೊಲೀಸರನ್ನು ನಿಯೋಜಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

Related