ಶ್ರೀಜೇಶ್ ಗೆ ಕೋಟಿ ರೂ. ಬಹುಮಾನ

  • In Sports
  • August 9, 2021
  • 358 Views
ಶ್ರೀಜೇಶ್ ಗೆ ಕೋಟಿ ರೂ. ಬಹುಮಾನ

ತಿರುವನಂತಪುರ: ಒಲಂಪಿಕ್ಸ್ ನ ಪುರುಷ ಹಾಕಿಯಲ್ಲಿ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಕೇರಳದ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಗೆ ಇಂದು ದುಬೈ ಮೂಲದ ಉದ್ಯಮಿ, 1 ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ. ಭಾರತೀಯ ಹಾಕಿ ಕ್ರೀಡೆಗೆ ಅವರ ಕೊಡುಗೆಯನ್ನು ಗುರುತಿಸಿ ನಗದು ಬಹುಮಾನ ಘೋಷಿಸಲು ಖುಷಿಪಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.
ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಜರ್ಮನಿ ವಿರುದ್ಧ 5-4 ಗೋಲುಗಳಿಂದ ಗೆಲುವು ದಾಖಲಿಸಿದ ಭಾರತದ ಹಾಕಿ ತಂಡವು 41 ವರ್ಷಗಳ ಬಳಿಕ ಕಂಚಿನ ಪದಕ ಜಯಿಸಿತ್ತು.

Related