ಬಿಜೆಪಿ ಕ್ಷೇತ್ರಗಳಿಗೆ ಕೋಟಿ ಕೋಟಿ ಅನುಧಾನ-ಜೆಡಿಎಸ್,ಕಾಂಗ್ರೆಸ್ ಆಕ್ರೋಶ

ಬಿಜೆಪಿ ಕ್ಷೇತ್ರಗಳಿಗೆ ಕೋಟಿ ಕೋಟಿ ಅನುಧಾನ-ಜೆಡಿಎಸ್,ಕಾಂಗ್ರೆಸ್ ಆಕ್ರೋಶ

ಬೆಂಗಳೂರಿನಲ್ಲಿ ‘ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ’ ಯೋಜನೆಗೆ ಒದಗಿಸಿದ 6 ಸಾವಿರ ಕೋಟಿ ರೂ. ಅನುದಾನದಲ್ಲಿ ಸಿಂಹಪಾಲು ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಹೋಗಿದೆ. ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡ ಕ್ಷೇತ್ರಕ್ಕೆ 700 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಇತರರ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ. ಮಂಡ್ಯದಲ್ಲೂ ಕೆ. ಆರ್. ಪೇಟೆ ಶಾಸಕ ಹಾಗೂ ಸಚಿವ ನಾರಾಯಣಗೌಡ ಅನುದಾನ ಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ, ಬೆಳಗಾವಿ, ತುಮಕೂರು, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇದೇ ಸ್ಥಿತಿ ಉಂಟಾಗಿದೆ.

ರಾಜಧಾನಿ ಬೆಂಗಳೂರಿನಿಂದ ಹಿಡಿದು ಕಲಬುರಗಿಯವರೆಗೆ ಈ ವಿಚಾರದಲ್ಲಿ ತಾರತಮ್ಯ ನಡೆದಿರುವುದರ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ. ಕಾಂಗ್ರೆಸ್, ಜೆಡಿಎಸ್ ಶಾಸಕರು ಈ ಬಗ್ಗೆ ಆಕ್ರೋಶ ತೋಡಿಕೊಳ್ಳುತ್ತಿದ್ದಾರೆ. ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕಾಮಗಾರಿಗಳೇ ನಡೆದಿಲ್ಲ. ಈಗ ಚುನಾವಣೆ ವರ್ಷದಲ್ಲಿ ಜನರ ಗಮನ ಸೆಳೆಯಲು ಸರಕಾರ ಮುಂದಾಗಿದೆ. ಅದರ ಭಾಗವಾಗಿ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಭರಪೂರ ನೆರವು ಕಲ್ಪಿಸಲಾಗುತ್ತಿದೆ ಎಂದು ಇತರ ಪಕ್ಷಗಳ ಶಾಸಕರು ದೂರುತ್ತಿದ್ದಾರೆ.

Related