ಇಂದು ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ

ಇಂದು ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ದರ್ಶನ್ ತೂಗುದೀಪ್ ಅವರು ತಮ್ಮ ಗೆಳತಿ ಪವಿತ್ರ ಗೌಡ ಅವರಿಗೆ ಚಿತ್ರದುರ್ಗದ ಮೂಲದ ರೇನುಕಾ ಸ್ವಾಮಿ ಎಂಬುವ ವ್ಯಕ್ತಿ ಅಶ್ಲೀಲ ಸಂದೇಶ ಕಳಿಸುತ್ತಿದ್ದರು ಎಂಬ ಕಾರಣಕ್ಕೆ ಸಂಬಂಧಿಸಿದಂತೆ ಸುಮಾರು 17 ಜನ ಸೇರಿಕೊಂಡು ರೇಣುಕಾ ಸ್ವಾಮಿ ಕೊಲೆ ಮಾಡಿದ್ದಾರೆ.

ಇನ್ನು ಈ ಕೊಲೆಗೆ ಸಂಬಂಧಿಸಿದಂತೆ 17 ಆರೋಪಿಗಳು ಈಗಾಗಲೇ ಜೈಲು ಸೆರೆವಾಸ ಅನುಭವಿಸುತ್ತಿದ್ದು, ನಟ ದರ್ಶನ್ ಮತ್ತು ಪವಿತ್ರ ಗೌಡ ಅವರ ಜಾಮೀನು ಅರ್ಜಿ ಇಂದು (ಬುಧವಾರ ಅ. 09) ರಂದು ವಿಚಾರಣೆಯಾಗುತ್ತಿದ್ದು ಇಂದಾದರೂ ದರ್ಶನ್ ಗೆ ಜಾಮೀನು ಸಿಗುತ್ತಾ ಎಂದು ಎಲ್ಲಾ ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಪವಿತ್ರಾ ಸೇರಿದಂತೆ ಇನ್ನಿತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರು 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಕಳೆದ ಒಂದು ವಾರದಿಂದಲೂ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದು, ದರ್ಶನ್ ಪರ ವಕೀಲ ಸಿವಿ ನಾಗೇಶ್, ಪವಿತ್ರಾ ಪರ ವಕೀಲ ಸೆಬಾಸ್ಟಿಯನ್ ಅವರುಗಳು ಆರೋಪ ಪಟ್ಟಿ ಮತ್ತು ಪೊಲೀಸರ ತನಿಖೆ ಬಗ್ಗೆ ಎತ್ತಿದ್ದ ಅನುಮಾನಗಳಿಗೆ, ಪ್ರಶ್ನೆಗಳಿಗೆ ಎಸ್​ಪಿಪಿ ಪ್ರಸನ್ನ ಕುಮಾರ್ ಸ್ಪಷ್ಟನೆಗಳನ್ನು ನೀಡುತ್ತಿದ್ದಾರೆ. ಇದನ್ನೂ ಓದಿ: ದಾಸನಿಗೆ ಇಂದಾದರೂ ಸಿಗುತ್ತಾ ಜಾಮೀನು?

ಇಂದು ಮಧ್ಯಾಹ್ನ ವಿಚಾರಣೆ ಪ್ರಾರಂಭವಾಗಿದ್ದು, ಸಂಜೆ ವರೆಗೆ ವಿಚಾರಣೆ ನಡೆಯಲಿದೆ. ಇಂದು ನಡೆಯಲಿರುವ ಜಾಮೀನು ಅರ್ಜಿ ವಿಚಾರಣೆ ಗೆ ಸಂಬಂಧಿಸಿದಂತೆ ದರ್ಶನ್ ಪರ ವಕೀಲರು ಯಾವೆಲ್ಲ ವಾದಗಳನ್ನು ನ್ಯಾಯಾಧೀಶರ ಮುಂದೆ ಮಂಡಿಸುತ್ತಾರೆ ಎಂದು ಕಾದು ನೋಡಬೇಕಿದೆ.

Related