ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿಂಗಳುಗಳು ಜೈಲು ಸೇರೆವಾಸ ಅನುಭವಿಸಿ ಇದೀಗ ಪವಿತ್ರ ಮತ್ತು ದರ್ಶನ್ ಸೇರಿದಂತೆ 17 ಆರೋಪಿಗಳು ಷರತ್ತುಬದ್ಧ ಜಾಮೀನು ಮೇಲೆ ಹೊರಬಂದಿದ್ದಾರೆ.
ಇನ್ನು ಕೋರ್ಟ್ ಜಾಮಿ ನೀಡುಬೇಕಾದ್ರೆ 17 ಆರೋಪಿಗಳಿಗೆ ಹಲವಾರು ಷರತ್ತುಗಳನ್ನು ವಿಧಿಸಲಾಗಿದ್ದು, ಅದರ ಪ್ರಕಾರ ಪ್ರತಿ ತಿಂಗಳು 17 ಆರೋಪಿಗಳು ಕೋರ್ಟಿಗೆ ಹಾಜರಾಗ ಬೇಕಾಗಿರುತ್ತದೆ. ಹಾಗಾಗಿ ಇಂದು (ಮಂಗಳವಾರ ಫೆ.25) ರಂದು 17 ಜನ ಆರೋಪಿಗಳು ಮುಖಾಮುಖಿಯಾಗಲಿದ್ದಾರೆ.
ಇನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಅವರು ಇಂದು ಮುಖ ಮುಖ್ಯ ಯಾಗಲಿದ್ದಾರೆ ಎಂದು ತಿಳಿದುಬಂದಿದೆ
ಯೆಸ್…ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಅರೆಸ್ಟ್ ಆಗಿದ್ದರು. ಇವರೆಲ್ಲರೂ ಈಗ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದಾರೆ. ಈ ಪ್ರಕರಣದ 17 ಆರೋಪಿಗಳು ಇಂದು ಕೋರ್ಟ್ ಮುಂದೆ ಹಾಜರಾಗುವ ಸಾಧ್ಯತೆ ಇದೆ. ಕೋರ್ಟ್ ವಿಚಾರಣೆ ವೇಳೆ ದರ್ಶನ್ ಹಾಗೂ ಪವಿತ್ರಾ ಮತ್ತೆ ಮುಖಾಮುಖಿ ಆಗುವ ಸಾಧ್ಯತೆ ಇದೆ.
ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ 17 ಆರೋಪಿಗಳ ವಿಚಾರಣೆ ನಡೆಯಲಿದೆ. ಜಡ್ಜ್ ಎದುರು ಆರೋಪಿಗಳು ತಮ್ಮ ಹೇಳಿಕೆ ನೀಡಲಿದ್ದಾರೆ.