ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಸಿಎಂ

ರಾಜಕೀಯ ನಿವೃತ್ತಿ ಸವಾಲು ಹಾಕಿದ ಡಿಸಿಎಂ

ಮೈಸೂರು: ನೂರು ದಿನ ಪೂರೈಸಿದ ಸಂಭ್ರಮದಲ್ಲಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗರು ಒಂದಲ್ಲ ಒಂದು ರೀತಿಯ ಆರೋಪವನ್ನು ಮಾಡುತ್ತಿದ್ದಾರೆ. ಇದರ ಬೆನ್ನೆಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ನಾಯಕರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ನಾನು ಮಾಡಿರುವ ಆರೋಪ ಏನಾದ್ರೂ ನಿಜವಾದರೆ ನಾನು ರಾಜಕೀಯ ನಿವೃತ್ತಿ ಮಾಡುತ್ತೇನೆ. ಬಿಜೆಪಿ ನಾಯಕರ ಬಂಡವಾಳವನ್ನು ಬಯಲು ಬೆಳೆಯುವ ಸಮಯ ಹತ್ತಿರವಾಗುತ್ತಿದೆ. ಇವರ ಬಣ್ಣವನ್ನು ನಾನು ಬಯಲು ಮಾಡುತ್ತೇನೆ  ಎಂದು ಗುಡುಗಿದರು.

ರಾಜ್ಯ ಸರ್ಕಾರ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದರೆ ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ. ಇದರಲ್ಲಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿಯವರು ಆರೋಪ ಸಾಬೀತು ಮಾಡಲಿ. ಇವರದ್ದನ್ನು ಬಿಚ್ಚೋ ಕಾಲ ಬರುತ್ತದೆ ಬಿಚ್ಚುತ್ತೇನೆ. ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಸವಾಲು ಹಾಕುವ ಮೂಲಕ ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದರು.

 

Related