ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿಸಿಎಂ ಭೇಟಿ

ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿಸಿಎಂ ಭೇಟಿ

ಬೆಂಗಳೂರು: ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಇಂದು ಉಪಮುಖ್ಯಮಂತ್ರಿಯಾಗಿರುವಂತಹ ಡಿಕೆ ಶಿವಕುಮಾರ್ ಅವರು ಮಾಜಿ ಸಚಿವ ಕೃಷ್ಣಪ್ಪ ಅವರ ಪುತ್ರಿ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಅವರ ನಿವಾಸಕ್ಕೆ ಭೇಟಿ ನೀಡಿದರು.

ಪೂರ್ಣಿಮಾ ಶ್ರೀನಿವಾಸ್ ಅವರು ಇಂದು ಕೆ.ಆರ್ ಪುರಂನ ದೇವಸಂದ್ರದಲ್ಲಿರುವ ತಮ್ಮ ನಿವಾಸದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಿದ್ದಾರೆ. ಈ ವೇಳೆ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿ, ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸದಲ್ಲೇ ಕೃಷ್ಣ ಜನ್ಮಾಷ್ಟಾಮಿಯ ವಿಶೇಷ ಭೋಜನವನ್ನು ಸವಿದಿದ್ದಾರೆ. ಇತ್ತೀಚೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಕೂಡ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.

ಪೂರ್ಣಿಮಾ ಶ್ರೀನಿವಾಸ್ ಅವರ ತಂದೆ ದಿವಂಗತ ಕೃಷ್ಣಪ್ಪ ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ರು. ಇತ್ತೀಚೆಗೆ ಬಿಜೆಪಿ ನಾಯಕಿ ಪೂರ್ಣಿಮಾ ಶ್ರೀನಿವಾಸ್ ಕೂಡ ಕಾಂಗ್ರೆಸ್ ಸೇರ್ಪಡೆ ವದಂತಿ ಚರ್ಚೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಅವರ ಈ ಭೇಟಿ ತುಂಬಾ ಚರ್ಚೆಗೆ ಗ್ರಾಸವಾಗಿದೆ.

 

 

Related