ಸಾಮಾಜಿಕ ಅಂತರ ಪಾಲನೆಗೆ ಡಿಸಿ ಸೂಚನೆ

ಸಾಮಾಜಿಕ ಅಂತರ ಪಾಲನೆಗೆ ಡಿಸಿ ಸೂಚನೆ

ಗದಗ : ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲಿರುವ ಮನೆಗಳನ್ನು ಗುರುತಿಸಿ ಅವುಗಳಲ್ಲಿ ವಾಸ ಮಾಡುವ ಜನ ಜಾನುವಾರುಗಳನ್ನು ಕೂಡಲೇ ಸ್ಥಳಾಂತರಿಸುವAತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ (ಅ.3) ಜರುಗಿದ ಜಿಲ್ಲೆಯ ಎಲ್ಲ ತಾಲ್ಲೂಕುಗಳ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳು, ಕೃಷಿ, ಆರೋಗ್ಯ ಇಲಾಖಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ಮನೆ ಹಾಗೂ ಜಾನುವಾರುಗಳ ಸಮೀಕ್ಷೆಯನ್ನು ವಿಳಂಬ ಮಾಡದೆ, ಶೀಘ್ರವಾಗಿ ಪೂರ್ಣಗೊಳಿಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಬೇಕು. ಬೆಳೆ ಸಮೀಕ್ಷಾ ಕಾರ್ಯದಿಂದ ಜಿಲ್ಲೆಯ ಯಾವೊಬ್ಬ ರೈತರು ವಂಚಿತರಾಗಬಾರದು. ನಿಗದಿತ ಅವಧಿಯೊಳಗೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು. ಅಲ್ಲದೇ, ಮಳೆಯಿಂದಾಗಿ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಜಂಟಿ ಸಮೀಕ್ಷೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಪರಿಹಾರ ಪೋರ್ಟಲನಲ್ಲಿ ನೋಂದಾಯಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಪಶ್ಚಿಮ ಪದವೀಧರರ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೇ ಪ್ರಥಮ ಬಾರಿಗೆ ಕೋವಿಡ್-19 ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸುತ್ತಿದ್ದು ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಚುನಾವಣೆ ಜರುಗಿಸಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

.

Related