ಮೆಬಿನಾ ರಸ್ತೆ ಅಪಘಾತದಲ್ಲಿ ಸಾವು

ಮೆಬಿನಾ ರಸ್ತೆ ಅಪಘಾತದಲ್ಲಿ ಸಾವು

ಮಂಡ್ಯ:  ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಖ್ಯಾತಿಯ ಮೆಬಿನಾ ಮೈಕಲ್ ಮಂಳವಾರ ಸಂಜೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರಿನಲ್ಲಿ ತೆರಳುತ್ತಿದ್ದ  ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಗಾಯಾಳುಗಳಿಗೆ ಆದಿಚುಂಚನಗಿರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆ ಮೆಬಿನಾ ಸಾವನ್ನಪ್ಪಿದ್ದಾರೆ.

Related