ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ

ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ

ಬೆಂಗಳೂರು: ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ, ತತ್ಪರಿಣಾಮ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಶುಕ್ರವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೆ ಟಾಂಗಾ ಜಾಥಾ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರರು ಭಾಗವಹಿಸಿದ್ದರು. ಜಾಥಾ ಮಾರ್ಗದುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಮಾಡಲಾಯಿತು.

Related