ಉಮೇಶ್ ಕತ್ತಿ ನಿಧನದಿಂದ ತೀವ್ರ ದುಃಖವಾಗುತ್ತಿದೆ: ಸಿದ್ದು

ಉಮೇಶ್ ಕತ್ತಿ ನಿಧನದಿಂದ ತೀವ್ರ ದುಃಖವಾಗುತ್ತಿದೆ: ಸಿದ್ದು

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಸಚಿವ ಉಮೇಶ್ ಕತ್ತಿಯವರಿಗೆ ಅಂತಿಮ‌ ನಮನ ಸಲ್ಲಿಸಿದರು.‌

ಕತ್ತಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Related