ಸೋಲು ಶಾಶ್ವತವಲ್ಲ ನಿಖಿಲ್

ಸೋಲು ಶಾಶ್ವತವಲ್ಲ ನಿಖಿಲ್

ರಾಮನಗರದ: 2023ನೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿರುದ್ಧ ಸೋಲನ್ನು ಕಂಡಿದ್ದಾರೆ.

ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಸೋತರು ಸಹ ರಾಮನಗರದ ಜನತಾ ಜೊತೆ ಒಡನಾಟವನ್ನು ಬೆಳೆಸಿಕೊಂಡಿದ್ದಾರೆ.

ಹೌದು, ಗೆಲ್ಲುವ ಅಭ್ಯರ್ಥಿ ಎಂದೇ ನಿರೀಕ್ಷೆ ಹುಟ್ಟಿಸಿದ್ದ ನಟ, ಜೆಡಿಎಸ್ ಯುವ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನುಂಡಿದ್ದಾರೆ. ಈಗಲೂ ರಾಮನಗರ ಜನತೆಗೆ ಈ ಸೋಲವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ರಾಮನಗರದಲ್ಲಿ ಸೋತರೂ, ನಿನ್ನೆ ಅಲ್ಲಿಗೆ ತೆರಳಿದ್ದ ನಿಖಿಲ್ ಕುಮಾರ ಸ್ವಾಮಿ ಪ್ರತಿ ಮನೆ ಮನೆಗೆ ತೆರಳಿ ಧನ್ಯವಾದ ತಿಳಿಸಿದ್ದಾರೆ. ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ಎದುರು ಸೋತಿದ್ದ ನಿಖಿಲ್‌ ಕುಮಾರಸ್ವಾಮಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ, ಆ ವಿಶ್ವಾಸ ಹುಸಿಯಾಗಿದೆ. ಈ ಕ್ಷೇತ್ರವನ್ನು ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಬಿಟ್ಟುಕೊಟ್ಟಿದ್ದರು. ಮಗನ ಮೇಲೆ ಅತೀವ ನಿರೀಕ್ಷೆ ಕೂಡ ಇಟ್ಟುಕೊಂಡಿದ್ದರು.

ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ ಅಭ್ಯರ್ಥಿ ಇಕ್ಬಾಲ್ ಹುಸೇನ್ ಎದುರು 10,715 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ನಿಖಿಲ್‌ ಕುಮಾರಸ್ವಾಮಿ ಫೇಸ್‌ಬುಕ್‌ನಲ್ಲಿ ಭಾವುಕ ಪೋಸ್ಟ್‌ ಬರೆದುಕೊಂಡಿದ್ದಾರೆ.

ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆ ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ ಎಂದು ಬರೆದುಕೊಂಡಿದ್ದಾರೆ.

Related