3ನೇ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’

3ನೇ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’

ಮಂಗಳವಾರದಿಂದ ದೇಶದ ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ಪ್ರಾರಂಭವಾಗಿದ್ದು, ಇಂದು ಮೂರನೇ ದಿನಕ್ಕೆ ಈ ಪ್ರತಿಭಟನೆ ಕಾಲಿಟ್ಟಿದ್ದು ಇಂದು ರೈತರನ್ನು ಉದ್ದೇಶಿಸಿ ಮೂರು ಜನ ಕೇಂದ್ರ ಸಚಿವರು ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರದಿಂದಲೂ ಕೂಡ ರೈತರನ್ನು ಹೋರಾಟದಿಂದ ತಡೆಯಲು ಪೊಲೀಸ್ ಅಧಿಕಾರಿಗಳು ತಡೆ ಗೊಡೆ ಹಾಕಿದರು ಕೂಡ ರೈತರು ತಮ್ಮ ಹಟಬಿಡದೆ ಹೋರಾಟವನ್ನು ಮುಂದುವರಿಸಿದ್ದಾರೆ. ಇನ್ನು ಈ ಹೋರಾಟದಲ್ಲಿ ಕೆಲವು ರೈತರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೌದು, ದೆಹಲಿ ಚಲೋ  ಪ್ರತಿಭಟನೆಯು ಇಂದಿಗೆ 3ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ ಮತ್ತೊಂದು ಸುತ್ತಿನ ಮಾತುಕತೆಗಾಗಿ ರೈತ ಮುಖಂಡರನ್ನು ಭೇಟಿಯಾಗಲಿದ್ದಾರೆ.

ಮೊನ್ನೆ ಮಂಗಳವಾರ ಬೆಳಗ್ಗೆ ಪಂಜಾಬ್‌ನ ರೈತರು ರಾಷ್ಟ್ರ ರಾಜಧಾನಿ ಕಡೆಗೆ ತಮ್ಮ ದೆಹಲಿ ಚಲೋ ಮೆರವಣಿಗೆಯನ್ನು ಪ್ರಾರಂಭಿಸಿದಾಗಿನಿಂದ, ಭದ್ರತಾ ಸಿಬ್ಬಂದಿ ತಡೆದ ಕಾರಣ ಘರ್ಷಣೆಯುಂಟಾಗಿ ರೈತರು ಗಾಯಗೊಂಡಿದ್ದಾರೆ.

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಪ್ರತಿಭಟನಾ ದೆಹಲಿ ಚಲೋ ಮೆರವಣಿಗೆಯನ್ನು ಮುನ್ನಡೆಸುತ್ತಿವೆ.

 

Related