ಮೀನು, ಕುರಿ ಮಾಂಸಕ್ಕೆ ಡಿಮ್ಯಾಂಡ್

  • In State
  • March 18, 2020
  • 409 Views
ಮೀನು, ಕುರಿ ಮಾಂಸಕ್ಕೆ ಡಿಮ್ಯಾಂಡ್

ಮೈಸೂರು, ಮಾ. 18: ಹಕ್ಕಿ ಜ್ವರದ ಎಫೆಕ್ಟ್ ನಿಂದ ಮೈಸೂರು ನಗರದಾದ್ಯಂತ ಕೋಳಿಗಳ ಮಾರಾಟ ಬಂದ್ ಆಗಿದೆ. ಹೀಗಾಗಿ ಕುರಿ, ಮೇಕೆ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದೆ. ಹಕ್ಕಿ ಜ್ವರದ ಹಿನ್ನೆಲೆ ಚಿಕನ್ ಮಾರಾಟ ಸ್ಥಗಿತಗೊಂಡಿರು ಪರಿಣಾಮ ಮೀನು, ಕುರಿ, ಮೇಕೆ ಮಾಂಸದ ಮಾರಾಟದಲ್ಲಿ ಹೆಚ್ಚಳ ಕಂಡಿದೆ. ಅತ್ತ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಇತ್ತ ಕುರಿ, ಮೇಕೆ ಮಾಂಸದ ಬೆಲೆಯಲ್ಲಿ ಏರಿಕೆಯಾಗಿದ್ದು, ಮಂಗಳವಾರ ಒಂದು ಕೆ.ಜಿಗೆ 550 ರೂಪಾಯಿ ಇದ್ದ ದರ ಇಂದು 600 ರೂಪಾಯಿಗೆ ಏರಿಕೆಯಾಗಿದೆ. ಮೀನಿನ ದರ ಮಾತ್ರ ಯಥಾಸ್ಥಿತಿಯಲ್ಲಿ ಇದೆ. ಕೋಳಿ ಮಾರಾಟ ನಿಷೇಧ ಹೀಗೆ ಮುಂದುವರಿದರೆ ಮಟನ್ ಬೆಲೆ ಕೆಜಿಗೆ 800 ರೂಪಾಯಿ ಆಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಮೈಸೂರಿನ ಕುಂಬಾರಕೊಪ್ಪಲು ಮನೆಯೊಂದರಲ್ಲಿ ಇತ್ತೀಚೆಗೆ ಸತ್ತಿದ್ದ ಕೋಳಿ ಹಾಗೂ ಸ್ಮಶಾನದಲ್ಲಿ ಮೃತಪಟ್ಟಿದ್ದ ಪಕ್ಷಿಯ ಮೃತದೇಹದ ಮಾದರಿಗಳನ್ನು ಭೂಪಾಲ್ನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಹೈಸೆಕ್ಯೂರಿಟಿ ಅನಿಮಲ್ ಡೀಸಿಸ್ಗೆ ಕಳುಹಿಸಲಾಗಿತ್ತು. ಮೈಸೂರಿನಿಂದ ಕಳುಹಿಸಿದ್ದ ಏಳು ಮಾದರಿಗಳಲ್ಲಿ ಎರಡು ಮಾದರಿಗಳು ಪಾಸಿಟಿವ್ ಬಂದಿದೆ. ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಒಟ್ಟು 17,820 ಮನೆಗಳಿವೆ. ಅದರಲ್ಲಿ 144 ಮನೆಗಳಲ್ಲಿ ಪಕ್ಷಿಗಳಿವೆ. ಈ ಪೈಕಿ ನೈಸರ್ಗಿಕ ಪಕ್ಷಿಗಳು 1,252, ಔದ್ಯಮಿಕ ಪಕ್ಷಿಗಳು 5,100 ಹಾಗೂ ಸಾಕು ಪಕ್ಷಿಗಳು 254 ಎಂದು ಗುರುತಿಸಲಾಗಿದೆ. ಇದರಲ್ಲಿ ಕ್ವೈಲ್ಸ್ 12 ಹಾಗೂ ಟರ್ಕಿ 18 ಸೇರಿ ಒಟ್ಟು 6,436 ಪಕ್ಷಿಗಳಿದ್ದು, ಎಲ್ಲವನ್ನೂ ನಾಶಪಡಿಸಲು ನಿರ್ಧರಿಸಲಾಗಿದೆ.

Related