ವಿದ್ಯಾರ್ಥಿಗಳ ಪರ ವಕಾಲತ್ತು ಹಾಕದಂತೆ ನಿರ್ಣಯ

ವಿದ್ಯಾರ್ಥಿಗಳ ಪರ ವಕಾಲತ್ತು ಹಾಕದಂತೆ ನಿರ್ಣಯ

ಹುಬ್ಬಳ್ಳಿ, ಫೆ. 21: ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂಜಿನಿಯರಿAಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ಹಾಕದಂತೆ ಹುಬ್ಬಳ್ಳಿ ಬಾರ್ ಅಸೋಸಿಯೇಷನ್ ತೆಗೆದುಕೊಂಡ ನಿರ್ಣಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ಹಾಕದಂತೆ ಹುಬ್ಬಳ್ಳಿ ಬಾರ್ ಅಸೋಸಿಯೇಷನ್ ನಿರ್ಣಯ ತೆಗೆದುಕೊಂಡಿತ್ತು. ಇದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರ, ಹುಬ್ಬಳ್ಳಿ ಬಾರ್ ಅಸೋಸಿಯೇಷನ್ ಸೇರಿ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಹುಬ್ಬಳ್ಳಿ ಬಾರ್ ಅಸೋಸಿಯೇಷನ್ ಪದಾಧಿಕಾರಿಗಳನ್ನೂ ಪ್ರತಿವಾದಿಗಳನ್ನಾಗಿ ಸೇರಿಸುವಂತೆ ಅರ್ಜಿದಾರರಿಗೆ ನ್ಯಾಯಪೀಠ ಸೂಚಿಸಿತು.

ಆರೋಪಿಗಳ ಪರ ವಕಾಲತ್ತು ವಹಿಸಲು ಮುಂದಾಗುವ ವಕೀಲರಿಗೆ ಸಂಪೂರ್ಣ ಪೊಲೀಸ್ ಭದ್ರತೆ ಒದಗಿಸುವಂತೆ ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ ಮುಖ್ಯನ್ಯಾಯಮೂರ್ತಿಗಳ ಪೀಠ, ವಿಚಾರಣೆ ಮಾ.3ಕ್ಕೆ ಮುಂದೂಡಿದೆ.

 

Related